ಭಿನ್ನಮತ, ಸಂಪುಟ ಪುನರ್ರಚನೆ ಚರ್ಚೆಯ ಮಧ್ಯೆ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿರುವ ರಾಜ್ಯ ಉಸ್ತುವಾರಿ ಸುರ್ಜೇವಾಲಾ

ಬೆಂಗಳೂರು: ಕರ್ನಾಟಕದ ಆಡಳಿತ ಪಕ್ಷವಾದ ಕಾಂಗ್ರೆಸ್‌ನ ಆಂತರಿಕ ಅಸಮಾಧಾನದ ನಡುವೆ ಕರ್ನಾಟಕದ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೋಮವಾರ ಪಕ್ಷದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಕ್ಷದೊಳಗಿನ ಆಂತರಿಕ ಗೊಂದಲ ಹಾಗೂ ಅಸಮಾಧಾನ ಪರಿಹರಿಸುವ ಉದ್ದೇಶದಿಂದ ಎರಡು ದಿನಗಳ ಭೇಟಿಗಾಗಿ ಸೋಮವಾರ (ಜೂನ್‌ ೩೦) ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ವಾರದ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಮ್ಮದೇ ಸರ್ಕಾರದ ವಿರುದ್ಧ ಆರೋಪಗಳನ್ನು ಹೊರಿಸಿದ್ದ ಅತೃಪ್ತ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ ಸರಣಿ ಸಭೆಗಳ ನಂತರ ಸುರ್ಜೆವಾಲಾ ಭೇಟಿ ಮಾಡುತ್ತಿದ್ದಾರೆ.

ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್. ಪಾಟೀಲ್ ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರೆ, ಕಾಗವಾಡ ಶಾಸಕ ರಾಜು ಕಾಗೆ ಅವರು ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಅಸಮಾದಾನ ವ್ಯಕ್ತಪಡಿಸಿದ್ದರು.
ತಮ್ಮ ಭೇಟಿಯ ಸಮಯದಲ್ಲಿ, ಸುರ್ಜೆವಾಲಾ ಅವರು ಇತ್ತೀಚೆಗೆ ಸಾರ್ವಜನಿಕ ಹೇಳಿಕೆಗಳಿಂದ ಪಕ್ಷವನ್ನು ಮುಜುಗರಕ್ಕೀಡು ಮಾಡಿರುವ ಮತ್ತು ಕರ್ನಾಟಕ ಕಾಂಗ್ರೆಸ್‌ನಲ್ಲಿ ಪ್ರಶ್ನೆಗಳನ್ನು ಎತ್ತಿರುವ ಕೆಲವು ನಾಯಕರೊಂದಿಗೆ ಮುಖಾಮುಖಿ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಸಂಭಾವ್ಯ ನಾಯಕತ್ವ ಬದಲಾವಣೆಯ ಸುತ್ತ ಬೆಳೆಯುತ್ತಿರುವ ಚರ್ಚೆಗೆ ಸುರ್ಜೆವಾಲಾ ಕಡಿವಾಣ ಹಾಕುವ ಸಾಧ್ಯತೆಯಿದೆ. ಈ ವಿಷಯದ ಬಗ್ಗೆ ಕಾಂಗ್ರೆಸ್ ನಾಯಕರು ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ಅವರು ಸೂಚನೆಗಳನ್ನು ನೀಡಬಹುದು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ರಾಜ್ಯದ ಉನ್ನತ ನಾಯಕತ್ವದಲ್ಲಿ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಕಾಂಗ್ರೆಸ್ ಶಾಸಕ ಎಚ್‌ಎ ಇಕ್ಬಾಲ್ ಹುಸೇನ್ ಸುಳಿವು ನೀಡಿದ್ದಾರೆ. “ಇದು ಹೈಕಮಾಂಡ್ ಮನಸ್ಸಿನಲ್ಲಿಟ್ಟುಕೊಂಡಿರುವ ವಿಷಯ” ಎಂದು ಅವರು ಹೇಳಿದ್ದಾರೆ.
“ಸರಿಯಾದ ಸಮಯ ಬಂದಾಗ, ಹೈಕಮಾಂಡ್ ಡಿ.ಕೆ. ಶಿವಕುಮಾರ ಅವರಿಗೆ ಅವಕಾಶ ನೀಡುತ್ತದೆ. ಅದು ಈ ವರ್ಷ ಸಂಭವಿಸುವ ಸಾಧ್ಯತೆಯಿದೆ. ಎಲ್ಲಾ ನಾಯಕರು ದೊಡ್ಡ ರಾಜಕೀಯ ಸಂಚಲನದ ಬಗ್ಗೆ ಮಾತನಾಡುತ್ತಿದ್ದಾರೆ. ಎರಡು ಮೂರು ತಿಂಗಳಲ್ಲಿ ನಿರ್ಧಾರ ಬರುತ್ತದೆ ಎಂದು ನಾನು ನೇರವಾಗಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ಶಾಸಕರು ಹೇಳಿದರು.

ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರ ಮತ್ತು ಆಡಳಿತದ “ಸಂಪೂರ್ಣ ಕುಸಿತ”ದ ಕುರಿತು ಕಾಂಗ್ರೆಸ್ ಶಾಸಕರು ನೀಡಿರುವ ಹೇಳಿಕೆಗಳು ಆಡಳಿತ ಪಕ್ಷವನ್ನು ಮುಜುಗರಕ್ಕೀಡು ಮಾಡಿವೆ, ವಿಪಕ್ಷ ಬಿಜೆಪಿ ಮತ್ತು ಜನತಾದಳ (ಜಾತ್ಯತೀತ) ಅಥವಾ ಜೆಡಿಎಸ್ ಸರ್ಕಾರವನ್ನು ಭ್ರಷ್ಟಾಚಾರದ ಆರೋಪ ಮಾಡಲು ಈ ಅವಕಾಶವನ್ನು ಬಳಸಿಕೊಂಡಿವೆ.
ವಸತಿ ಇಲಾಖೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಿ.ಆರ್‌.ಪಾಟೀಲ ಆಡಿಯೊ ವೈರಲ್‌ ಆದ ನಂತರ ವಿಪಕ್ಷಗಳು ಸಿದ್ದರಾಮಯ್ಯ ಮತ್ತು ರಾಜ್ಯ ವಸತಿ ಸಚಿವ ಜಮೀರ್ ಅಹ್ಮದ್ ಅವರ ರಾಜೀನಾಮೆಗೆ ಒತ್ತಾಯಿಸಿವೆ. ಈ ಮಧ್ಯೆ ದೆಹಲಿಯಿಂದ ಹಿಂದಿರುಗಿದ ನಂತರ ಬುಧವಾರ ಬಿ.ಆರ್.‌ ಪಾಟೀಲ ಮತ್ತು ರಾಜು ಕಾಗೆ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆತಂಕವನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement