ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 30ರ ವರೆಗೆ ಭಾರೀ ಮಳೆ ಮುನ್ನೆಚ್ಚರಿಕೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ನಿಧಾನವಾಗಿ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರ ವರೆಗೆ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್(Yellow Alert)​ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಅಲ್ಲದೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ,ಯಾದಗಿರಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ವಿಜಯಪುರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಭಾನುವಾರ ಕುಂದಾಪುರ, ಕೋಟ, ಮಂಕಿ, ಸಿದ್ದಾಪುರ, ಹೊನ್ನಾವರ, ಶಿರಾಲಿ, ಗೇರುಸೊಪ್ಪ, ಅಂಕೋಲಾ, ಕಾರ್ಕಳದಲ್ಲಿ ಭಾರಿ ಮಳೆಯಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement