ಜೂನ್‌ 11ರಂದು ಶಕ್ತಿ ಯೋಜನೆಗೆ ಚಾಲನೆ: ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ…!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಮೂರನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ.
ಇದೇ ಭಾನುವಾರ ಜೂನ್‌ 11ರಂದು ಮೊದಲ ಯೋಜನೆಗೆ ವಿಧಾನಸೌಧ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ.43 ಬಸ್‌ನಲ್ಲಿ ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಈ ಮಹಾತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ. ಬಸ್ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement