ಗುಜರಾತ್‌: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ೨೦ ಮಂದಿಗೆ ಗಾಯ

ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿರುವ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ೨೦ ಜನರು ಗಾಯಗೊಂಡಿದ್ದಾರೆ.
ಜಗಾಡಿಯಾ ಕೈಗಾರಿಕಾ ಪ್ರದೇಶದ ಯುಪಿಎಲ್ -5 ರಾಸಾಯನಿಕ ಉತ್ಪಾದನಾ ಕಂಪನಿಯ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯ ಮಟ್ಟ ಭಾರೀ ಜೋರಾಗಿದ್ದು, ಅದರ ಶಬ್ದ 10 ಕಿ.ಮೀ ಗಿಂತ ಹೆಚ್ಚು ದೂರ ಕೇಳಿಬಂದಿದೆ.
ಸ್ಫೋಟದ ಶಬ್ದ ಕೇಳಿದ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಯುಪಿಎಲ್-5 ರಾಸಾಯನಿಕ ಉತ್ಪಾದನಾ ಕಂಪನಿಯಾಗಿದ್ದು ಇದರಲ್ಲಿ ನೂರಾರು ಸಂಖ್ಯೆಯ ಜನರು ಕೆಲಸ ಮಾಡುತ್ತಿದ್ದಾರೆ. ಈ ಅವಘಡ ರಾತ್ರಿ ಸುಮಾರು 12 ಗಂಟೆಯಿಂದ 1 ಗಂಟೆಯೊಳಗೆ ನಡೆದಿದೆ. ರಾತ್ರಿ ಪಾಳಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದರು.
ಈ ಪೈಕಿ ಎಂಟು ಮಂದಿ ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಘಟನೆ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಸುಮಾರು ಹದಿನೈದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ.
ಆದರೆ ಬೆಂಕಿಯ ತೀವ್ರತೆ ಜೋರಾಗಿದ್ದರಿಂದ ಆರಂಭದಲ್ಲಿ ಕಾರ್ಯಾಚರಣೆಗೆ ತೊಡಕಾಗಿತ್ತು. ಇನ್ನು ಬೆಂಕಿ ಅವಘಡದಕ್ಕೆ ಕಾರಣ ಏನು ಎಂದು ತಿಳಿದುಬಂದಿಲ್ಲ. ಕೆಮಿಕಲ್‌ ರಿಯಾಕ್ಷನ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಪ್ರಮುಖ ಸುದ್ದಿ :-   ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement