ರಾಜ್ಯದಲ್ಲಿ 17,850 ಧ್ವನಿವರ್ಧಕಗಳಿಗೆ ಅನುಮತಿ ನೀಡಿದ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಒಟ್ಟು 17,850 ಧ್ವನಿವರ್ಧಕಗಳ ಬಳಕೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಅರ್ಜಿಗಳ ಪರಿಶೀಲನೆ ಪೂರ್ಣಗೊಳಿಸಿರುವ ಗೃಹ ಇಲಾಖೆ 10,889 ಮಸೀದಿಗಳೂ ಸೇರಿದಂತೆ ದೇವಸ್ಥಾನಗಳು, ಮಸೀದಿಗಳು, ಚರ್ಚ್‌ಗಳು, ರೆಸ್ಟೋರೆಂಟ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 17,850 ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಿದೆ.
ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಲಾಗಿದೆ. ಇವುಗಳಿಗೆ ತಲಾ ₹ 450 ಶುಲ್ಕ ವಿಧಿಸಲಾಗಿದೆ. ಗೃಹ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ ಅತ್ಯಧಿಕ 1,841 ಧ್ವನಿವರ್ಧಕಗಳ ಬಳಕೆಗೆ ಪರವಾನಗಿಗಳನ್ನು ನೀಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ 744 ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಲಾಗಿದ್ದು, ಇದು ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯ ಮಸೀದಿಗಳು ಪರವಾನಗಿ ಪಡೆದ ಜಿಲ್ಲೆ ಎಂದು ಹೇಳಲಾಗಿದೆ.

ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗಿನ ಅವಧಿಯಲ್ಲಿ ಮಸೀದಿಗಳಲ್ಲೂ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬಾರದು ಎಂದು ಹಿಂದು ಪರ ಸಂಘಟನೆಗಳು ಒತ್ತಾಯ ಮಾಡಿದ್ದವು. ಮಸೀದಿಗಳಲ್ಲಿ ರಾತ್ರಿ ಹಾಗೂ ಬೆಳಿಗ್ಗೆ ಆಝಾನ್‌ ಕೂಗುವುದನ್ನುಧ್ವನಿ ವರ್ಧಕಗಳಲ್ಲಿ ದೊಡ್ಡದಾಗಿ ಹಾಗಕುವುದಕ್ಕೆ ಪ್ರತಿಯಾಗಿ ಕೆಲವೆಡೆ ದೇವಸ್ಥಾನಗಳಲ್ಲಿ ಹನುಮಾನ್‌ ಚಾಲೀಸಾ ಪಠಣವೂ ಆರಂಭವಾಗಿತ್ತು.
ನಂತರ ರಾಜ್ಯ ಸರ್ಕಾರ ಮೇ 10ರಂದು ಸುತ್ತೋಲೆ ಹೊರಡಿಸಿ ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯಗೊಳಿಸಿತ್ತು. ಸುಪ್ರೀಂ ಕೋರ್ಟ್‌ ಮಾರ್ಗಸೂಚಿಯ ಪ್ರಕಾರ ನಿಗದಿತ ಪ್ರಮಾಣದ ಶಬ್ಧದ ಮಿತಿಯನ್ನೂ ದಾಟಬಾರದು ಎಂದು ಸೂಚಿಸಿತ್ತು.

ಪ್ರಮುಖ ಸುದ್ದಿ :-   ವಿಧಾನ ಪರಿಷತ್ ಚುನಾವಣೆ; 4 ಕ್ಷೇತ್ರಗಳಲ್ಲಿ ಎರಡರಲ್ಲಿ ಎನ್‌ಡಿಎ ಗೆಲುವು, ಉಳಿದ ಎರಡರಲ್ಲೂ ಗೆಲುವು ಬಹುತೇಕ ಖಚಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement