ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ನಿಧನ

ಮಂಗಳೂರು : ಕರ್ಣಾಟಕ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪೊಳಲಿ ಜಯರಾಮ ಭಟ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.
ಇಂದು ಬುಧವಾರ ಮುಂಬೈನಿಂದ ವಿಮಾನದಲ್ಲಿ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಸಂದರ್ಭದಲ್ಲಿ ಅವರು ಹಠಾತ್‌ ಹೃದಯಾಘಾತಕ್ಕೆ ಒಳಗಾದರು.. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತರಾಗಿದ್ದಾರೆ ಎಂದು ವರದಿಯಾಗಿದೆ.
2009ರಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು. ಜಯರಾಮ್ ಭಟ್ ಅವರಿಗೆ ಅತ್ಯುತ್ತಮ ಮ್ಯಾನೇಜರ್ ಅವಾರ್ಡ್, ಅತ್ಯುತ್ತಮ ಸಾಧಾನಾ ಪ್ರಶಸ್ತಿ, ಮಣಿಪಾಲ ವಿವಿಯಿಂದ 2015ರ ಹೊಸ ವರ್ಷದ ಪ್ರಶಸ್ತಿ ಪಡೆದುಕೊಂಡಿದ್ದರು.
ಮೂಲತಃ ಪೊಳಲಿಯವರಾದ ಜಯರಾಂ ಭಟ್ ಅವರು 1951 ನವೆಂಬರ್ 14 ರಂದು ಜನಿಸಿದ್ದರು. 1972 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂಎಸ್ಸಿಯನ್ನು ಪ್ರಥಮ ರ‍್ಯಾಂಕ್‌ನೊಂದಿಗೆ ಪಡೆದುಕೊಂಡಿದ್ದರು. 1986 ರಲ್ಲಿ CAIIB ಪರೀಕ್ಷೆಯಲ್ಲಿ ಯಶಸ್ವಿಯಾದ ನಂತರ, ಅವರು 1972 ರಲ್ಲಿ ಮೂರು ತಿಂಗಳ ಕಾಲ ಮುಲ್ಕಿಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ಬಳಿಕ 1973 ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕಿಗೆ ಸೇರಿ ಬ್ಯಾಂಕಿಂಗ್‌ ಕ್ಶೇತ್ರದಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದರು.
1976 ರಲ್ಲಿ ಅವರು ಶಾಖೆಯ ವ್ಯವಸ್ಥಾಪಕರಾಗಿ ಭಡ್ತಿ ಪಡೆದು ಇದಾದ ಬಳಿಕ 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿದರು. ಅವರು ಸಹಾಯಕ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿ ನೇಮಕಗೊಂಡರು ಮತ್ತು 2005 ರಲ್ಲಿ ಮುಖ್ಯ ಜನರಲ್ ಮ್ಯಾನೇಜರ್ ಹುದ್ದೆಗೆ ಬಡ್ತಿ ಪಡೆದಿದ್ದರು.
ಜಯರಾಂ ಭಟ್‌ ಅವರ ಅವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್, ಆನ್‌ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್ ಮುಂತಾದ ಯಶಸ್ವಿ ಯೋಜನೆಗಳನ್ನು ಪರಿಚಯಿಸಿದ್ದರು. ಅವರ ಆಡಳಿತ ಅವಧಿಯಲ್ಲಿ ಕರ್ಣಾಟಕ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಕಂಡಿತ್ತು.

ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement