ರಾಜ್ಯದಲ್ಲಿ ಏರುತ್ತಿರುವ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಶುಕ್ರವಾರ ಒಂದೇ ದಿನ ಹೊಸದಾಗಿ 131 ಮಂದಿಗೆ ಕೊರೊನಾ ಸೋಂಕು ದಾಖಲಾಗಿದೆ. ಹಾಗೂ ಸೋಂಕಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 61, ಶಿವಮೊಗ್ಗದಲ್ಲಿ 27, ಚಿಕ್ಕಮಗಳೂರು 13, ಮೈಸೂರು 5, ಬಳ್ಳಾರಿ, ಹಾಸನ ತಲಾ 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 5,179 ಮಂದಿಗೆ ಕೊರೊನಾ ಸೋಂಕಿನ ಪರೀಕ್ಷೆಗೊಳಪಡಿಸಲಾಗಿತ್ತು. ಅದರಲ್ಲಿ 131 ಮಂದಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 126 ಮಂದಿ ಗುಣಮುಖರಾಗಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement