ಬೆಳಗಾವಿ: ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಆತ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಚಾಕು ಇರಿದ ಆರೋಪಿಯನ್ನು ದರ್ಶನ್ ಎಂದು ಗುರುತಿಸಲಾಗಿದೆ. ಮಡಿವಾಳಪ್ಪ ಎಂಬವರು ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ ಎಂದು ಹೇಳಲಾಗಿದೆ. ದರ್ಶನ್ ಯುವತಿಯೊಂದಿಗೆ ದೇವಸ್ಥಾನಕ್ಕೆ ಹೋಗಿದ್ದ. ಇದಕ್ಕೆ ಮಡಿವಾಳಪ್ಪ ಎಂಬವರು ಯುವತಿಯ ಕುಟುಂಬದವರ ಎದುರಿಗೆ ಯುವಕನಿಗೆ ಬುದ್ಧಿ ಹೇಳಿದ್ದಾರೆ.
ಇದರಿಂದ ಕೋಪಗೊಂಡ ಯುವಕ ದರ್ಶನ್, ಮಡಿವಾಳಪ್ಪ ಅವರ ಕಣ್ಣಿಗೆ ಖಾರದಪುಡಿ ಎರಚಿ, ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಡಿವಾಳಪ್ಪ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ನಿಮ್ಮ ಕಾಮೆಂಟ್ ಬರೆಯಿರಿ