ಬೆಂಗಳೂರು: ಕೊರೊನಾ ಆಸ್ಪತ್ರೆಗಳಲ್ಲಿ ಬೆಡ್ ಹಂಚಿಕೆ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಬಿಬಿಎಂಪಿ ದಕ್ಷಿಣ ವಲಯ ವಾರ್ ರೂಮ್ನ 17 ಹೊರಗುತ್ತಿಗೆ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.
ವಾರ್ ರೂಮ್ನಲ್ಲಿ ಡಾಟಾ ಎಂಟ್ರಿ ಕೆಲಸ ಮಾಡುತ್ತಿದ್ದ 17 ಹೊರ ಗುತ್ತಿಗೆ ಸಿಬ್ಬಂದಿ ಹಣ ನೀಡಿದವರಿಗೆಬೆಡ್ ನೀಡುತ್ತಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಮತ್ತು ಸತೀಶ್ ರೆಡ್ಡಿ ಗಂಭೀರ ಆರೋಪ ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಸಿಬ್ಬಂದಿ ನಡೆಸಿದ ಅವ್ಯವಹಾರದ ಹಿಂದೆ ಯಾರ್ಯಾರಿದ್ದಾರೆ, ಸೋಂಕಿತರ ಆಸ್ಪತ್ರೆ ದಾಖಲಾತಿಗೆ ಹಣ ಪಡೆದವರು ಯಾರು ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ