ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ವಾಪಸ್‌ ಪಡೆದಿದ್ದಾರೆ.
ಶಿರಹಟ್ಟಿ ಭಾವೈಕ್ಯ ಪೀಠದ ಹಿರಿಯ ಸ್ವಾಮೀಜಿ (ಫಕೀರ ಶಿವಯೋಗಿ ಸಿದ್ಧರಾಮ ಸ್ವಾಮೀಜಿ) ಅವರ ಸೂಚನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಅವರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅವರು ಸೋಮವಾರ ನಾಮಪತ್ರ ವಾಪಸ್‌ ಪಡೆದಿದ್ದಾರೆ. ನಾಮಪತ್ರ ಸಲ್ಲಿಕೆಗೆ ಸೂಚಕರಾಗಿದ್ದ ಸಚಿನ್‌ ಪಾಟೀಲ ಮತ್ತು ಅಮೃತ ಬಳ್ಳೊಳ್ಳಿ ಅವರ ಮೂಲಕ ನಾಮಪತ್ರ ವಾಪಸ್ ಪಡೆದಿದ್ದಾರೆ.
ದಿಂಗಾಲೇಶ್ವ ಸ್ವಾಮೀಜಿ ಅವರು, ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ನನ್ನ ಗುರಿ’ ಎಂದು ಹೇಳಿದ್ದರು. ಹಾಗೂ ಅಭ್ಯರ್ಥಿಯನ್ನು ಬದಲಿಸುವಂತೆ ಬಿಜೆಪಿಗೆ ಗಡುವು ನೀಡಿದ್ದರು. ಆದರೆ ಬಿಜೆಪಿ ಪ್ರಹ್ಲಾದ ಜೋಶಿ ಅವರನ್ನೇ ಕಣಕ್ಕಿ ಇಳಿಸಿತ್ತು. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್​ ಜೋಶಿ ವಿರುದ್ಧ ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ಇದೀಗ ದಿಂಗಾಲೇಶ್ವರ ಶ್ರೀಗಳು ನಾಮಪತ್ರ ಹಿಂಪಡೆದಿದ್ದಾರೆ. ಹಾಗೂ ತಮ್ಮ ಮಾದ ಹಿರಿಯ ಸ್ವಾಮೀಜಿ ಸೂಚನೆಯ ಮೇರೆಗೆ ನಾಮಪತ್ರ ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement