ದೆಹಲಿ ನಿರ್ಭಯಾ ಪ್ರಕರಣದಂತೆಯೇ, ಮುಂಬೈನಲ್ಲೂ ಅತ್ಯಾಚಾರಿಗಳಿಂದ ಕ್ರೌರ್ಯ

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯಾ ಪ್ರಕರಣದಂತೆ ಮುಂಬೈನಲ್ಲೂ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯ ಎಸಗಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳು,ಅವಳ ಖಾಸಗಿ ಭಾಗಕ್ಕೆ ರಾಡ್ ಹಾಕಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಘಟನೆ ಬಗ್ಗೆ ‘ಇಂಡಿಯಾ ಟುಡೇ’ ವರದಿ ಮಾಡಿದೆ.
ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಪೊಲೀಸರು ಈಗಗಲೇ ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಷ್ಟು ದುಷ್ಕರ್ಮಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಮುಂಬೈನ ಸಾಕಿ ನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಹೇಳಿದ್ದು. ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ತನಿಖೆ ನಡೆಸಲಾಗುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement