ಕೆಎಸ್‌ಆರ್‌ಟಿಸಿ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು,: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಪುನಶ್ಚೇತನ ಮಾಡಲು ತಜ್ಞರ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.
ಸಾರಿಗೆ ಸಂಸ್ಥೆ ಸೇರಿದಂತೆ ಸರ್ಕಾರದ ಹಲವು ಇಲಾಖೆಗಳಲ್ಲಿ ಆದಾಯ ಇಲ್ಲ ಅವುಗಳ ಪುನಶ್ಚೇತನಕ್ಕೆ ಹಾಗೂ ಲಾಭದತ್ತ ಕೊಂಡೊಯ್ಯಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ
ನಗರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ೬೦ನೇ ವರ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಎಸ್ ಆರ್ ಟಿ ಸಿ ನಷ್ಟದಲ್ಲಿರುವುದು ನಿಜ.ಅದರ ಪುನಶ್ವೇತನಕ್ಕೆ ತಜ್ಞರ ಸಮಿತಿ ರಚಿಸಿ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯಲು ಪ್ರಯತ್ನಿಸಲಾಗುವುದು ಎಂದರು.
ಸಾರಿಗೆ ಸಚಿವ ಬಿ. ಶ್ರೀರಾಮುಲು ಮಾತನಾಡಿ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಸರ್ಕಾರ ನಿಮ್ಮ ಸಹಾಯಕ್ಕೆ ಇದೆ. ಕೋವಿಡ್ ನಿಂದ ಸಾರಿಗೆ ಸಂಸ್ಥೆಗೆ ಸಾಕಷ್ಟು ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.
ಸಾರಿಗೆ ಸಂಸ್ಥೆ ಎದುರಿಸುತ್ತಿರುವ ಸಮಸ್ಯೆಯ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ . ಚಿಂತೆ ಮಾಡಬೇಡಿ ಸರ್ಕಾರ ಸಾರಿಗೆ ನೌಕರರ ಜೊತೆ ಇರಲಿದೆ ಎಂದು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು
ಅಪಘಾತ ರಹಿತ ಚಾಲನೆಗಾಗಿ ಮಾಡಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ನಾಲ್ಕು ಸಾರಿಗೆ ನಿಗಮಗಳ ಚಾಲಕರಿಗೆ ಸನ್ಮಾನ ಮಾಡಿದ ಚಾಲಕರ ಕಾರ್ಯ ದಕ್ಷತೆಯನ್ನು ಹೊಗಳಿದರು. ಸಚಿವರಾದ ಶ್ರೀರಾಮುಲು, ಕೋಟಾ ಶ್ರೀನಿವಾಸ್ ಪೂಜಾರಿ, ಬಿ.ಸಿ.ನಾಗೇಶ್ ಶಾಸಕ ರಿಜ್ವಾನ್ ಹರ್ಷದ್ ಕೆಎಸ್‌ಆರ್ಟಿಸಿ ಅಧ್ಯಕ್ಷ ಚಂದ್ರಪ್ಪ ಸೇರಿ ಹಲವರಿದ್ದರು

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement