
ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಕಪೇಟೆಯಲ್ಲಿರುವ ಬಳೇಪೇಟೆಯ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಬ್ಯಾನರ್ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ.
ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ ಆಚರಣೆ ಜೊತೆಗೆ ಕಾಶಿವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕೂಡ ಇತ್ತು. ಈ ವೇಳೆ ಆಯೋಜಕರು ಬ್ಯಾನರ್ ಕಟ್ಟಿದ್ದರು. ಅಲ್ಲದೆ, ಹುಲ್ಲು, ಹೂವುಗಳಿಂದ ತೋರಣವನ್ನು ಅಲಂಕಾರ ಮಾಡಿದ್ದರು. ಗುರುವಾರ ಸಂಜೆ ಪಟಾಕಿ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ಕಿಡಿ ತೋರಣಕ್ಕೆ ತಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. . ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಹಾಗೂ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದರು.ಹೀಗಾಗಿ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.



ನಿಮ್ಮ ಕಾಮೆಂಟ್ ಬರೆಯಿರಿ