11,705 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಸ್‌ಎನ್‌ಎಲ್‌

ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಖಾಲಿ ಇರುವ ಬರೋಬ್ಬರಿ 11,705 ಜೂನಿಯರ್ ಟೆಲಿಕಾಂ ಆಫೀಸರ್(ಟೆಲಿಕಾಂ)(JTO)ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತರು ಆನ್​ಲೈನ್​/ಆಫ್​ಲೈನ್(Online/Offline) ಎರಡರ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್​ಎನ್​ಎಲ್(BSNL)​ನ ಅಧಿಕೃತ ವೆಬ್​ಸೈಟ್​​ bsnl.co.inಗೆ ಭೇಟಿ ನೀಡಬಹುದು.
ಸಂಸ್ಥೆ-ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)
ಹುದ್ದೆ-ಜೂನಿಯರ್ ಟೆಲಿಕಾಂ ಆಫೀಸರ್ (JTO)
ಒಟ್ಟು ಹುದ್ದೆ-11,705
ಮಾಸಿಕ ವೇತನ- 16,400-40,500 ರೂ.ಗಳು
ಉದ್ಯೋಗದ ಸ್ಥಳ- ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ-ಆನ್​ಲೈನ್​/ಆಫ್​ಲೈನ್
ಅರ್ಜಿ ಸಲ್ಲಿಕೆ ಆರಂಭ- ಡಿಸೆಂಬರ್ 31, 2022
ಕೊನೆಯ ದಿನಾಂಕ-ಜನವರಿ 31, 2023
ಅರ್ಜಿ ಶುಲ್ಕ: ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಕಡ್ಡಾಯವಾಗಿ ದೂರಸಂಪರ್ಕ/ಎಲೆಕ್ಟ್ರಾನಿಕ್ಸ್/ರೇಡಿಯೊ/ಕಂಪ್ಯೂಟರ್/ಎಲೆಕ್ಟ್ರಿಕಲ್/ಐಟಿ/ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಎಲೆಕ್ಟ್ರಾನಿಕ್ಸ್/ಸಿಎಸ್‌ಇಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:ಜನವರಿ 31, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ:
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳು 3 ವರ್ಷ, PWD(ಜನರಲ್) ಅಭ್ಯರ್ಥಿಗಳಿಗೆ 10 ವರ್ಷ, PWD (OBC) ಅಭ್ಯರ್ಥಿಗಳಿಗೆ 13 ವರ್ಷ, PWD (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆ ಇದೆ.
ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್‌ಗೆ ಇಲ್ಲಿ BSNL-JTO-RECRUITMENT-2023-Govjobresult.in-1-1   ಕ್ಲಿಕ್‌ ಮಾಡಬಹುದು.
ಅಭ್ಯರ್ಥಿಗಳ ಆಯ್ಕೆ: ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ, ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್​​ಲಿಸ್ಟ್​ ಮಾಡಿ, ಸಂದರ್ಶನಕ್ಕೆ ಕರೆಯಲಾಗುತ್ತದೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement