ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಈ ರಾಜ್ಯಗಳಲ್ಲಿ ಮತ್ತೆ ಮಳೆ ಅಬ್ಬರದ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಒಟ್ಟು 12 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಈ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ದುರ್ಬಲವಾಗಿರುವ ಮಾನ್ಸೂನ್ ಮುಂದಿನ ನಾಲ್ಕು ದಿನಗಳವರೆಗೆ ತುಂಬಾ ತೀವ್ರವಾಗಿರಲಿದೆ ಎಂದು ಅದು ಹೇಳಿದೆ. ಕರ್ನಾಟಕದ ಕರಾವಳಿಯ ವಿವಿಧ ಭಾಗಗಳು, ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ, ಕೊಂಕಣ ಗೋವಾ, ಮಧ್ಯ ಮಹಾರಾಷ್ಟ್ರ, ಗುಜರಾತ್, ಪಂಜಾಬ್‌, ಉತ್ತರ ಪ್ರದೇಶ ಮೊದಲಾದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.

ಜತೆಗೆ ಉತ್ತರ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುಂಬೈನಲ್ಲಿ ಭಾರಿ ಮಳೆಯಿಂದಾಗಿ ಸೋಮವಾರ ಜನಜೀವನ ಅಸ್ತವ್ಯಸ್ತಗೊಂಡಿದೆ. ಯಮುನಾ ನದಿಯ ಉಪನದಿಯಾದ ಹಿಂಡನ್ ಕೂಡ ಅತಿಯಾದ ಮಳೆಯಿಂದಾಗಿ ಪರ್ವತಗಳಲ್ಲಿ ಹಾನಿಯನ್ನುಂಟು ಮಾಡುತ್ತಿದೆ. ಈ ಕಾರಣದಿಂದಾಗಿ ನೋಯ್ಡಾ, ಗಾಜಿಯಾಬಾದ್’ನ ಅನೇಕ ಪ್ರದೇಶಗಳಲ್ಲಿ ಜನರನ್ನು ಸ್ಥಳಾಂತರಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಸ್ಫೋಟ ಪ್ರಕರಣ ಭೇದಿಸಿದ ಪೊಲೀಸರು: ವೈಯಕ್ತಿಕ ದ್ವೇಷವೇ ಕೃತ್ಯಕ್ಕೆ ಕಾರಣ ; ಮೂವರ ಬಂಧನ

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement