ಡಿ.ರೂಪಾ ವಿರುದ್ಧ 1 ಕೋಟಿ ರೂ.ಗಳ ರೋಹಿಣಿ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ನಗರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ರೂಪಾ ಮೌದ್ಗಿಲ್ ಅವರು ಫೇಸ್‌ಬುಕ್, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಹಾಗಾಗಿ, ಅವರಿಂದ ಒಂದು ಕೋಟಿ ರೂ.ಗಳನ್ನು ಪರಿಹಾರವಾಗಿ ಕೊಡಿಸಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ ಸಿಂಧೂರಿ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಕೋರ್ಟ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಮೊಕದ್ದಮೆಯ ವಿಚಾರಣೆಯನ್ನು ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರು ಮಂಗಳವಾರ ನಡೆಸಿದರು. ಈ ವೇಳೆ ರೋಹಿಣಿ ಪರ ವಕೀಲರು, ದೂರುದಾರರ ವಿರುದ್ಧ ಡಿ.ರೂಪಾ ಅವರು ಕಪೋಲಕಲ್ಪಿತ ಆರೋಪಗಳನ್ನು ಮಾಡಿದ್ದಾರೆ. ಹಾಗಾಗಿ, ಈ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕು. ಆರೋಪಿ ರೂಪಾ ಮೌದ್ಗಿಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ಅರ್ಜಿದಾರರ ವಾದವನ್ನು ಪರಿಗಣಿಸಿರುವ ನ್ಯಾಯಾಲಯವು ಮೊಕದ್ದಮೆಯನ್ನ ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 3ಕ್ಕೆ ಮುಂದೂಡಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement