ಸಿಡಿ ಯುವತಿಯಿಂದ ಹೈಕೋರ್ಟಿಗೆ ಬರೆದ ಪತ್ರದ ವಿಷಯ ಗಾಬರಿ ತರಿಸುವಂತಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಹಲವು ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಸಿಡಿ ಸಂತ್ರಸ್ತೆ, ಇನ್ನೂ ಒಂದೆ ಹೆಜ್ಜೆ ಮುಂದೆ ಹೋಗಿ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರವನ್ನು ಬರೆದಿದ್ದಾರೆ ಎನ್ನುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ತರಿಸುವಂತಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ”ಎಂದು ಪ್ರಶ್ನಿಸಿದ್ದಾರೆ.
ಸಂತ್ರಸ್ತ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಬಂದರೆ ಎ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇರಾಜ್ಯ ಸರ್ಕಾರ ಹೊಣೆಯಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರುಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ ಎಂದು ಕೇಳಿದ್ದಾರೆ.
ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ತೆ ಯುವತಿ ಬರೆದ ಪತ್ರದಲ್ಲಿ ಎಸ್ಐಟಿ ಮೇಲೆಯೇ ಅನುಮಾನ ವ್ಯಕ್ತಪಡಿಸಿರುವುದು ಗಂಭೀರವಾದ ವಿಷಯ “ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement