ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ವಿಷಯ ಪದೇ ಪದೇ ಯಾಕೆ ಚರ್ಚೆ ಆಗುತ್ತಿದೆ ಎಂಬುದು ತಿಳಿಯುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದಾರು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಇದು ಎಲ್ಲಿ ಸೃಷ್ಟಿಯಾಯಿತು ಎಂದು ತಿಳಿಯುತ್ತಿಲ್ಲ.ಇಂತಹ ಚರ್ಚೆಯಿಂದ ಕೆಲಸ ಮಾಡಲು ಆಗುತ್ತಿಲ್ಲ. ಇದು ಸರ್ಕಾರದ ಸಂಪೂರ್ಣ ಆಡಳಿತಕ್ಕೆ ತೊಂದರೆಯಾಗುತ್ತಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊದಲಿನಿಂದಲೂ ಬಿಜೆಪಿ ಕಟ್ಟಿ ಬೆಳೆಸಿದವರು. ಅದಕ್ಕಾಗಿ ಅವರು ವರಿಷ್ಠರು ಹೇಳಿದಂತೆ ಕೇಳುತ್ತೇನೆ ಎಂದಿದ್ದಾರೆ. ಆ ಮಾತಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಈಗ ನಾಯಕತ್ವ ಬದಲಾವಣೆ ಬಗ್ಗೆ ವರಿಷ್ಠರ ಬಳಿ ಮತ್ತು ನಮ್ಮ ಹಂತದಲ್ಲಿ ಚರ್ಚೆಯೇ ನಡೆದಿಲ್ಲ ಎಂದು ಹೇಳಿದ ಅವರು ಎಲ್ಲ ವ್ಯವಸ್ಥೆಯಲ್ಲಿ ಪರ್ಯಾಯ ನಾಯಕರು ಇರುತ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅದೇ ಅರ್ಥದಲ್ಲಿ ಹೇಳಿದ್ದಾರೆ. ಅವರ ವಯಸ್ಸು ಅವರ ಕೆಲಸಕ್ಕೆ ಅಡ್ಡಿ ಬಂದಿಲ್ಲ. ಅಲ್ಲದೆ, ಸಹಿ ಸಂಗ್ರಹ ವಿಚಾರ ನನ್ನ ಗಮನಕ್ಕೆ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಕೊರೊನಾ ಸಕಾರಾತ್ಮಕತೆ ಪ್ರಮಾಣ ಶೇ 5ಕ್ಕಿಂತ ಕಡಿಮೆ ಬರುವ ವರೆಗೂ ಲಾಕ್‌ಡೌನ್ ತೆರವು ಮಾಡುವುದಿಲ್ಲ. ಜೂನ್ 14ರ ನಂತರ ಪರಿಸ್ಥಿತಿ ನೋಡಿಕೊಂಡು ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗುತ್ತದೆ ಎಂದು ಶೆಟ್ಟರ ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ