ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಬೆಂಗಳೂರು : ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಆರೋಪಿಯಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಅಮೃತ ಪೌಲ್‌ ಅವರಿಗೆ ಸೋಮವಾರ ಕರ್ನಾಟಕ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ.
545 ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮಗಳ ಹಗರಣದ ಪ್ರಕರಣದಲ್ಲಿ 25ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರ ಪೀಠವು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಸಿಕ್ಕ ಬಳಿಕ ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಗಳ ನಾಶ ಮಾಡಬಾರದು. ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು. ಹೊರ ದೇಶಕ್ಕೆ ಪ್ರಯಾಣ ಮಾಡಬಾರದು, ₹ 5 ಲಕ್ಷದ ಎರಡು ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಒದಗಿಸಬೇಕು ಎಂದು ಪೀಠ ಷರತ್ತುಗಳನ್ನು ವಿಧಿಸಿದೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement