ನಟಿ-ಮಾಜಿ ಸಂಸದೆ ಜಯಪ್ರದಾ ಬಂಧನಕ್ಕೆ ರಾಂಪುರ ನ್ಯಾಯಾಲಯ ಆದೇಶ

ನವದೆಹಲಿ: ಉತ್ತರ ಪ್ರದೇಶದ ರಾಂಪುರದಲ್ಲಿರುವ ಸಂಸದ/ಶಾಸಕರ ನ್ಯಾಯಾಲಯವು ರಾಜ್ಯಸಭಾ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ಅವರು ಅನೇಕ ಬಾರಿ ನ್ಯಾಯಾಲಯಕ್ಕೆ ಹಾಜರಾಗದ ನಂತರ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಜಯಪ್ರದಾ ವಿರುದ್ಧ ಹೊರಡಿಸಲಾದ ಏಳನೇ ವಾರಂಟ್ ಇದಾಗಿದ್ದು, ಆಕೆಯನ್ನು ಬಂಧಿಸುವಂತೆ ರಾಂಪುರ ಪೊಲೀಸ್ ವರಿಷ್ಠಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ.
2019ರ ಲೋಕಸಭಾ ಚುನಾವಣೆ ವೇಳೆ ಎರಡು ಪ್ರಕರಣಗಳಲ್ಲಿ ಜಯಪ್ರದಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು.ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿ ರಸ್ತೆಯೊಂದರ ಉದ್ಘಾಟನೆಯಲ್ಲಿ ಅವರು ಭಾಗವಹಿಸಿದ್ದರು ಎಂದು ವರದಿಯಾಗಿತ್ತು. ನಟಿ ರಸ್ತೆಯನ್ನು ಉದ್ಘಾಟಿಸಿದ ವಿಡಿಯೋ ಕೂಡ ವೈರಲ್ ಆಗಿತ್ತು.

ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದವು. ಪ್ರಾಸಿಕ್ಯೂಷನ್ ಸಾಕ್ಷ್ಯವು ಈಗಾಗಲೇ ಪೂರ್ಣಗೊಂಡಿದೆ ಮತ್ತು ಅವರು ತನ್ನ ಹೇಳಿಕೆಯನ್ನು ನೀಡಬೇಕಾಗಿತ್ತು ಎಂದು ವರದಿಯಾಗಿದೆ. ಆದರೆ ಆಕೆಗೆ ಹಲವು ದಿನಾಂಕಗಳನ್ನು ನೀಡಿದ್ದರೂ, ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ಇದುವರೆಗೆ ಜಯಪ್ರದಾ ವಿರುದ್ಧ ಏಳು ಜಾಮೀನು ರಹಿತ ಬಂಧನ ವಾರಂಟ್‌ಗಳನ್ನು ಹೊರಡಿಸಲಾಗಿದೆ. ಅದಕ್ಕಾಗಿಯೇ ನ್ಯಾಯಾಲಯ ಇದೀಗ ಜಯಪ್ರದಾ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದ್ದು, ಫೆಬ್ರವರಿ 27 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಹುಲಿ-ಕರಡಿ ಮಧ್ಯೆ "ಅಪರೂಪದ" ಮುಖಾಮುಖಿ; ಆಕ್ರಮಣಕಾರಿ ಕರಡಿಗೆ ಹುಲಿಯ ತಣ್ಣನೆಯ ಉತ್ತರ | ವೀಕ್ಷಿಸಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement