ಬೆಂಗಳೂರು: ರಾಜ್ಯದಲ್ಲಿ ಕೊರೋನಾಕಳೆದ ೨೪ ತಾಸಿನಲ್ಲಿ 622 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿನಿಂದ ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,362ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಭಾನುವಾರ 389 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,08,025ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 351 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 6,862 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 115 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ