ಧಾರವಾಡ : : ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಧಾರವಾಡ : ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್‌ (youth congress) ಮುಖಂಡ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಶುಕ್ರವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ಶುಕ್ರವಾರ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರಿಂದ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೃತ್ಯ ಎಸಗಿದ ಹಂತಕರು ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಹತ್ಯೆಗೀಡಾದ ಫೈರೋಜ್‌ ಪಠಾಣ್‌ ಅವರು ಕಾಂಗ್ರೆಸ್ಸಿನ ಯುವ ನಾಯಕರಾಗಿದ್ದರು. ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ನಂತರ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಘಟನೆ ನಡೆದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದು, ಹಂತಕರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಹತ್ಯೆಯ ಹಿಂದೆ ಹಳೆ ವೈಷಮ್ಯವಿದೆಯೇ ಅಥವಾ ರಾಜಕೀಯ ಕಾರಣಗಳಿವೆಯೇ ಎಂಬಿತ್ಯಾದಿ ಎಲ್ಲ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement