ನವದೆಹಲಿ: ಉತ್ತರಾಖಂಡ, ತಮಿಳುನಾಡು, ನಾಗಾಲ್ಯಾಂಡ್, ಪಂಜಾಬ್ ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ.
ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ನಿವೃತ್ತರಾದ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಗುರುವಾರ ನೇಮಿಸಲಾಗಿದೆ. ಲೆಫ್ಟಿನೆಂಟ್ ಜನರಲ್ ಸಿಂಗ್ ಅವರು ಸುಮಾರು ನಾಲ್ಕು ದಶಕಗಳ ಸೇವೆಯ ನಂತರ 2016 ರ ಫೆಬ್ರವರಿಯಲ್ಲಿ ಸೇನೆಯಿಂದ ನಿವೃತ್ತರಾಗಿದ್ದರು.ಉತ್ತರಾಖಂಡ್ ರಾಜ್ಯಪಾಲರಾಗಿದ್ದ ಬೇಬಿ ರಾಣಿ ಮೌರ್ಯ ವೈಯಕ್ತಿಕ ಕಾರಣಗಳಿಂದಾಗಿ ಅವಧಿಗೂ ಮೊದಲೇ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
.ಆರ್. ಎನ್. ರವಿ ತಮಿಳುನಾಡು ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಈ ಹೊಸ ನೇಮಕಾತಿ ಹೊರತಾಗಿಯೂ ರಾಷ್ಟ್ರಪತಿಗಳು ಕೆಲವು ರಾಜ್ಯಪಾಲರನ್ನು ವರ್ಗಾವಣೆ ಮಾಡಿದ್ದು, ಪಂಜಾಬ್ ಹೆಚ್ಚುವರಿ ರಾಜ್ಯಪಾಲರಾಗಿದ್ದ ಬನ್ವಾರಿಲಾಲ್ ಪುರೋಹಿತ್ ಅವರನ್ನು ತಮಿಳುನಾಡಿನಿಂದ ಪಂಜಾಬ್‌ಗೆ ವರ್ಗಾಯಿಸಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿ ಆರ್.ಎನ್.ರವಿ ಅವರನ್ನು ನಾಗಾಲ್ಯಾಂಡ್ ನಿಂದ ತಮಿಳುನಾಡಿಗೆ ವರ್ಗಾಯಿಸಲಾಗಿದೆ.
ಪ್ರಸ್ತುತ ಅಸ್ಸಾಂನ ರಾಜ್ಯಪಾಲರಾಗಿರುವ ಜಗದೀಶ್ ಮುಖಿ ಅವರಿಗೆ ಹೆಚ್ಚುವರಿಯಾಗಿ ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ