ವಿಶ್ವಕಪ್ ಲೀಗ್‌ ಪಂದ್ಯದಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರು…: ಬ್ಯಾಟಿಂಗ್‌, ಬೌಲಿಂಗ್‌ ನಲ್ಲಿ ಇವರೇ ಟಾಪರ್‌…

ಬೆಂಗಳೂರು: ಈ ಬಾರಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿವೆ. ಭಾರತ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ಗೆ ಪ್ರವೇಶಿವೆ.
ಸೆಮಿಫೈನಲ್‌ ಪಂದ್ಯಗಳು ನವೆಂಬರ್‌ 15, 16ರಂದು ಕ್ರಮವಾಗಿ ಮುಂಬೈ ಮತ್ತು ಕೋಲ್ಕತ್ತದಲ್ಲಿ ನಡೆಯಲಿವೆ. ರೌಂಡ್‌ ರಾಬಿನ್‌ ಮಾದರಿಯ ಲೀಗ್‌ ಹಂತದಲ್ಲಿ ಎಲ್ಲ ತಂಡಗಳು ತಲಾ 9 ಪಂದ್ಯಗಳಲ್ಲಿ ಸೆಣಸಾಟ ನಡೆಸಿವೆ. ಎಲ್ಲ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಭಾರತ, ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ತಲಾ 7ರಲ್ಲಿ ಜಯ ಸಾಧಿಸಿರುವ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಎರಡು ಮತ್ತು ಮೂರನೇ ಸ್ಥಾನಗಳಲ್ಲಿ ಕಾಣಿಸಿಕೊಂಡಿವೆ. 5ರಲ್ಲಿ ಗೆಲುವು ಕಂಡಿರುವ ನ್ಯೂಜಿಲೆಂಡ್‌ ನಾಲ್ಕನೇ ಸ್ಥಾನ ಪಡೆದಿದೆ.
ಮೊದಲ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌, ಎರಡನೇ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

ಈ ವಿಶ್ವಕಪ್‌ನಲ್ಲಿ ಲೀಗ್ ಹಂತದ ಪಂದ್ಯಗಳಲ್ಲಿ ಭಾರತದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅಧಿಕ ರನ್‌ ಗಳಿಸಿದ ಬ್ಯಾಟರ್‌ ಆಗಿದ್ದಾರೆ.
ಅವರು ಆಡಿರುವ 9 ಇನಿಂಗ್ಸ್‌ಗಳಲ್ಲಿ 2 ಶತಕ, 5 ಅರ್ಧ ಶತಕ ಸಹಿತ 594 ರನ್ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿ ಕಾಕ್‌ (591) ರನ್‌ ಗಳಸಿ ಅವರ ಹಿಂದೆಯೇ ಇದ್ದಾರೆ. ನ್ಯೂಜಿಲೆಂಡ್‌ನ ರಚಿನ್‌ ರವೀಂದ್ರ (565) ಮೂರನೇ ಹಾಗೂ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ (503) ನಾಲ್ಕನೇ ಮತ್ತು ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌ (499) ಐದನೇ ಸ್ಥಾನದಲ್ಲಿದ್ದಾರೆ.

ಪ್ರಮುಖ ಸುದ್ದಿ :-   ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

ಸಚಿನ್‌ ದಾಖಲೆ ಮುರಿಯುವ ಸಾಧ್ಯತೆ
ಭಾರತದ ಸಚಿನ್‌ ತೆಂಡೂಲ್ಕರ್‌ ಅವರು 2003ರ ವಿಶ್ವಕಪ್‌ ಟೂರ್ನಿಯಲ್ಲಿ 673 ರನ್ ಗಳಿಸಿದ್ದರು. ಇದು ಬ್ಯಾಟರ್‌ವೊಬ್ಬ ಒಂದೇ ಟೂರ್ನಿಯಲ್ಲಿ ಗಳಿಸಿದ ಗರಿಷ್ಠ ಸ್ಕೋರ್‌ ಆಗಿದೆ.
ಸದ್ಯ ಈ ಬಾರಿಯ ಸೆಮಿಫೈನಲ್‌ಗೆ ಪ್ರವೇಶ ಪಡೆದಿರುವ ತಂಡಗಳ ಪೈಕಿ ನಾಲ್ವರು ಬ್ಯಾಟರ್‌ಗಳು 500ಕ್ಕಿಂತ ಅಧಿಕ ರನ್ ಗಳಿಸಿದ್ದಾರೆ. ಇದರಲ್ಲಿ ಮೊದಲ ಸೆಮಿಫೈನಲ್‌ನಲ್ಲಿ ಕಣಕ್ಕಿಳಿಯಲಿರುವ ಭಾರತದ ವಿರಾಟ್‌ ಕೊಹ್ಲಿ, ನ್ಯೂಜಿಲೆಂಡ್‌ನ ರಚಿನ್ ರವೀಂದ್ರ ಹಾಗೂ ಎರಡನೇ ಸೆಮಿಫೈನಲ್‌ನಲ್ಲಿ ಕಣಕ್ಕಿಳಿಯುವ ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿ ಕಾಕ್‌ 600 ರನ್‌ ಸನಿಹದಲ್ಲಿದ್ದಾರೆ.

ಆಡಂ ಜಂಪಾಗೆ ಹೆಚ್ಚು ವಿಕೆಟ್‌
ಆಸ್ಟ್ರೇಲಿಯಾದ ಆಡಂ ಜಂಪಾ, ಲೀಗ್‌ ಹಂತದಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ ಎನಿಸಿದ್ದಾರೆ. ಅವರು ಆಡಿರುವ 9 ಪಂದ್ಯಗಳಲ್ಲಿ 22 ವಿಕೆಟ್‌ ಕಬಳಿಸಿದ್ದಾರೆ. ಇಷ್ಟೇ ಪಂದ್ಯ ಆಡಿರುವ ಶ್ರೀಲಂಕಾದ ದಿಲ್ಶಾನ್ ಮಧುಶಂಕ 21 ವಿಕೆಟ್‌ ಪಡೆದಿದ್ದಾರೆ
ದಕ್ಷಿಣ ಆಫ್ರಿಕಾದ ಜೆರಾಲ್ಡ್‌ ಕೋಜಿ (7 ಪಂದ್ಯ, 18 ವಿಕೆಟ್‌), ಪಾಕಿಸ್ತಾನದ ಶಾಹೀನ್‌ ಅಫ್ರಿದಿ (9 ಪಂದ್ಯ, 18 ವಿಕೆಟ್‌) ಮತ್ತು ಭಾರತದ ಜಸ್‌ಪ್ರೀತ್‌ ಬೂಮ್ರಾ (9 ಪಂದ್ಯ, 17 ವಿಕೆಟ್‌) ನಂತರದ ಸ್ಥಾನಗಳಲ್ಲಿದ್ದಾರೆ. ಆಡಿರುವ ಐದೇ ಇನಿಂಗ್ಸ್‌ಗಳಲ್ಲಿ 16 ವಿಕೆಟ್‌ ಪಡೆದಿರುವ ಮೊಹಮದ್ ಶಮಿ ಸಹ ರೇಸ್‌ನಲ್ಲಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement