ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇತ್ತೀಚಿಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಳೆ ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು, ಇಸ್ಲಾಮೀಕರಣಕ್ಕೆ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರಿಗೆ ಶೇಕಡಾ 4 ರಷ್ಟು ಮಿಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ. ಇದು ಹೀಗೆ ಮುಂದುವರೆದರೆ ಜನ ದಂಗೆ ಏಳುವ ಕಾಲ ದೂರವಿಲ್ಲ. ಕಾಂಗ್ರೆಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಅನ್ಯ ಕೋಮು ಮತ್ತು ಬೇರೆ ಪಕ್ಷದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement