ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಇಂದು ಮುಂಜಾನೆ 8.18ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಊರಿನವರು ಹೇಳಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ಈ ಅನುಭವ ಆಗಿರುವುದು ಭಯಕ್ಕೆ ಕಾರಣವಾಗಿದೆ.
ಸೆಪ್ಟೆಂಬರ್​ 4ರಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಇದೀಗ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿದೆ. ಒಂದು ವಾರದ ಹಿಂದೆ ಭೂಕಂಪ ಆಗಿ
ವ ಬಗ್ಗೆ ಹಾಗೂ ಅದರ ತೀವ್ರತೆ ಬಗ್ಗೆ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದೀಗ ಇಂದು ಮತ್ತೆ ಭೂಮಿ ನಡಗಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.,
ವಿಜಯಪುರ ಜಿಲ್ಲೆಯಾದ್ಯಂತ ಕಳೆದ ವಾರ 11.47ಕ್ಕೆ ಭೂಮಿ ಕಂಪಿಸಿದ ಅನುಭವವಾಗಿತ್ತು ರಾತ್ರಿ ಬಾಗಲಕೋಟೆ, ಜಮಖಂಡಿ ತಾಲೂಕಿನಲ್ಲಿ ಕಂಪನದ ಅನುಭವವಾಗಿದ್ದು, ಈ ಬಗ್ಗೆ ಬಾಗಲಕೋಟೆ ಜಿಲ್ಲಾಡಳಿತ ಖಚಿತಪಡಿಸಿದೆ. ಅಂಕಲಗಿ ಗ್ರಾಮದಲ್ಲಿ ಭೂಕಂಪನದ ಅನುಭವವಾದ ಹಿನ್ನೆಲೆ ಕೊಟ್ಟಿಗೆಯಲ್ಲಿ ದನಕರುಗಳು ಎದ್ದು ನಿಂತಿರುವುದು ತಿಳಿದುಬಂದಿದೆ. ಕೆ.ಎಲ್.ಬಿಲ್.ಕೇರಿ ಎಂಬುವರ ಕೊಟ್ಟಿಗೆಯಲ್ಲಿದ್ದ ಹಸುಗಳು ಭೂಕಂಪನ ಅನುಭವಕ್ಕೆ ದಿಢೀರನೆ ಎದ್ದು ನಿಂತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement