ಸಾರಿಗೆ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ವಿಜಯಪುರ: ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟು, 10ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕವಲಗಿ ಗ್ರಾಮದ ಮದಭಾವಿ ಕ್ರಾಸ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಬಸವನ ಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ ಮಕಾನದಾರ್ (36) ಮತ್ತು ಕಲಬುರಗಿ ಪಟ್ಟಣದ ನಿವಾಸಿ ರೋಹಿಣಿ ಪಂಚಾಳ (31) ಮೃತರಾಗಿದ್ದಾರೆ. ಎರಡು ಬಸ್ ಚಾಲಕರು ಸೇರಿದಂತೆ ಹತ್ತಕ್ಕೂ‌ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‍ಗಳ ಮುಂಭಾಗ ಭಾರೀ ಪ್ರಮಾಣದಲ್ಲಿ ಜಖಂ ಆಗಿದೆ. ಮುಂಭಾಗದಲ್ಲಿದ್ದವರಿಗೆ ತೀವ್ರ ಪೆಟ್ಟಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement