ಮೀಸಲಾತಿ‌ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ‌ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಪಂಚಮಸಾಲಿ ಸಮುದಾಯ ಪ್ರವರ್ಗ 2 ಎ ಮೀಸಲಾತಿ, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ. ವಾಲ್ಮೀಕಿ ಸಮುದಾಯ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಡ‌ ಹಾಕಿದೆ.ಇನ್ನೂ ಹಲವು ಸಮುದಾಯಗಳು ಬೇಡಿಕೆ ಇಟ್ಟಿರುವುದನ್ನು ಪರಿಶೀಲಿಸಿ ಸಮಿತಿ ವರದಿ ನೀಡಲಿದೆ ಎಂದು ಹೇಳಿದರು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಓರ್ವ ನಿವೃತ್ತ ಅಧಿಕಾರಿ ಮತ್ತು ಸಮಾಜ ವಿಜ್ಞಾನಿ ಸಮಿತಿ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದರು.
ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಅಧಿಕಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಇರುವ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದರೆ ಮೀಸಲಾತಿ ಪ್ರಮಾಣ ಶೇ. 50 ಮೀರುತ್ತದೆ..ಆದರೆ ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ಶೇ.50 ಮೀಸಲಾತಿ ಮೀರುವಂತಿಲ್ಲ. ಈ ಬಗ್ಗೆಯೂ ಸಮಿತಿ ಪರಿಶೀಲಿಸಿ ವರದಿ ನೀಡಲಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement