ಸೆಪ್ಟೆಂಬರ್‌ 2 ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದ್ದು, ಎನ್‍ಎಂಪಿಎದ ಹಲವು ಯೋಜನೆಗಳ ಉದ್ಘಾಟನೆಗಾಗಿ ಆಗಮಿಸಲಿದ್ದಾರೆ ಎನ್ನಲಾಗಿದೆ. ನವ ಮಂಗಳೂರು ಬಂದರಿನಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ ಪ್ರಧಾನಿ ಭಾಗಿಯಾಗಲಿದ್ದು,ಇದೇ ವೇಳೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ.
ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಧಾನಿಯವರು ಒಪ್ಪಿಕೊಂಡಿದ್ದಾರೆ. ಮಂಗಳೂರು ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತವಾಗಿದ್ದು, ಮಂಗಳೂರು ಪ್ರವಾಸ ಕಾರ್ಯಕ್ರಮ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement