ಪೆನ್ ಡ್ರೈವ್ ಹೊರಬಂದರೆ ಸಚಿವರೊಬ್ಬರು ರಾಜೀನಾಮೆ ನೀಡಬೇಕಾಗ್ತದೆ: ಮತ್ತೊಂದು ಬಾಂಬ್‌ ಸಿಡಿಸಿದ ಎಚ್‌ಡಿಕೆ

ಮೈಸೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪದ ನಂತರ ರಾಜ್ಯದಲ್ಲಿ ವರ್ಗಾವಣೆ ದಂಧೆ ಬಗ್ಗೆ ಚರ್ಚೆ ನಡೆಯುತ್ತಿದೆ.. ಈಗ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ನಾನು ಪೆನ್ ಡ್ರೈವ್ ನಲ್ಲಿ ಇರುವುದನ್ನು ಬಿಡುಗಡೆ ಮಾಡಿದ್ರೆ ಸಚಿವರೊಬ್ಬರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಸೂಕ್ತ ಸಮಯದಲ್ಲಿ ಪೆನ್ ಡ್ರೈವ್ ನಲ್ಲಿರುವ ದಾಖಲೆ ಬಿಡುಗಡೆ ಮಾಡುತ್ತೇನೆ. ಈ ಸರ್ಕಾರ ಏನು ಮಾತನಾಡುತ್ತದೆಯೋ ಎಲ್ಲವನ್ನು ಮಾತನಾಡಲಿ. ನನಗೆ ಪೆನ್ ಡ್ರೈವ್ ಬಿಡುಗಡೆ ಮಾಡುವ ಅವಸರವಿಲ್ಲ, ಸಮಯ ಬಂದಾಗ ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಪೆನ್ ಡ್ರೈವ್ ಮಾಹಿತಿ ಹೊರಗೆ ಬಂದರೆ ಸಚಿವರೊಬ್ಬರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಪುರಾವೆ ಇರುವ ಪೆನ್ ಡ್ರೈವ್ ನನ್ನ ಜೇಬಿನಲ್ಲಿದೆ, ಸರಿಯಾದ ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ, ಯಾವುದೇ ಸೂಕ್ತ ಮಾಹಿತಿ ಇಲ್ಲದೇ ಬಿಡುಗಡೆ ಮಾಡುವುದಿಲ್ಲ, ಇಲಾಖೆಯಲ್ಲಿನ ನೌಕರರ ವರ್ಗಾವಣೆ ಭ್ರಷ್ಟಾಚಾರದಲ್ಲಿ ಹಾಲಿ ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದೊಡ್ಡ ಪ್ರಮಾಣದ ವರ್ಗಾವಣೆ ದಂಧೆಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ….
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ವರ್ಗಾವಣೆ ದಂಧೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ , ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಇದುವರೆಗೆ ಮಾಡಿರುವ ಯಾವುದೇ ಆರೋಪಗಳಲ್ಲಿಯೂ ಅದನ್ನು ಅವರು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿಲ್ಲ. ಇದ್ದರೆ ಹೇಳಲಿ ಎಂದು ತಿರುಗೇಟಿ ನೀಡಿದ್ದಾರೆ.
ಕುಮಾರಸ್ವಾಮಿ ಹತಾಶರಾಗಿದ್ದಾರೆ. ಈಗ ಹೊಸ ಸರ್ಕಾರ ಬಂದಿದೆ, ಇದು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ. ಜನರಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ವರ್ಗಾವಣೆ ಮಾಡಲೇಬೇಕು. ಅದಕ್ಕೆ ದಂಧೆ ನಡೆದಿದೆ ಎಂಬುದು ಸುಳ್ಳು. ಅವರು ಹತಾಶೆಯಿಂದ ಹೀಗೆ ಹೇಳುತ್ತಿದ್ದಾರೆ ಎಂದು ಅದನ್ನು ತಲ್ಳಿಹಾಕಿದ್ದಾರೆ.
ಕುಮಾರಸ್ವಾಮಿ ಕಾಲದಲ್ಲಿ ವರ್ಗಾವಣೆ ಆಗಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ವರ್ಗಾವಣೆ ಆದಾಗೆಲ್ಲ ದಂಧೆ ನಡೆದಿದೆ ಎಂದರೆ ಹೇಗೆ? ಹಾಗಾದರೆ ಅವರು ದುಡ್ಡು ತಗೊಂಡಿದ್ದಾರೆಯೇ ಎಂದು ಕಿಡಿಕಾರಿದ್ದಾರೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement