ಬೆಂಗಳೂರು : ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಶಾಕ್ ಕೊಟ್ಟಿದೆ. ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನಲೆಯಲ್ಲಿ ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ಆದೇಶ ಹೊರಡಿಸಿದೆ.
ಈ ಆದೇಶದಂತೆ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಪ್ರತಿ ಯೂನಿಟ್ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ ವ್ಯಾಪ್ತಿಯಲ್ಲಿ 24 ಪೈಸೆ, ಸೆಸ್ಕ್ –34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.
ಕೇಂದ್ರ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (CGS), ಕರ್ನಾಟಕ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (KPCL) ಮತ್ತು ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ (UPCL) ನಿಂದ ಎಲ್ಲಾ ಎಸ್ಕಾಂಗಳು ವಿದ್ಯುತ್ ಖರೀದಿಸುತ್ತಿವೆ. ಏಪ್ರಿಲ್-2022 ರಿಂದ ಜೂನ್-2022 ರವರೆಗೆ 643 ಕೋಟಿ ರೂ.ಗಳಷ್ಟು ವಿದ್ಯುತ್ ಖರೀದಿ ವೆಚ್ಚ ಹೆಚ್ಚಳವಾಗಿದ್ದು, 80 ಪೈಸೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಸೂಲಿ ಮಾಡಲು ಬೆಸ್ಕಾಂ ಕೆಇಆರ್ ಸಿಗೆ ಆಗಸ್ಟ್ 30ರಂದು ಅರ್ಜಿ ಸಲ್ಲಿಸಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ