ಸಂಸತ್​ ಸದನದಲ್ಲಿ ಭಾರಿ ಭದ್ರತಾ ಲೋಪ: 4 ಮಂದಿ ಬಂಧನ, 2 ಘಟನೆ, ಮೈಸೂರಿನ ನಂಟು

ನವದೆಹಲಿ: ಬುಧವಾರ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ಸಂಭವಿಸಿದ್ದು, ಭದ್ರತೆ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.
ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಆರೋಪಿಗಳಾದ ಸಾಗರ ಶರ್ಮಾ ಮತ್ತು ಮನೋರಂಜನ ಮತ್ತು ಇತರ ಇಬ್ಬರನ್ನು ಗುಪ್ತಚರ ಅಧಿಕಾರಿಗಳ ತಂಡ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದೆ.
ಸದನ ಒಳಗೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಇಬ್ಬರು ಯುವಕರು ಹಳದಿ ಬಣ್ಣ ಹೊರಸೂಸುವ ವಸ್ತುವನ್ನು ಹಿಡಿದು ಸ್ಪೀಕರ್​ ಓಂ ಬಿರ್ಲಾ ಕಚೇರಿಯತ್ತ ನುಗ್ಗಿದರು. ಭಾರಿ ಭದ್ರತಾ ವ್ಯವಸ್ಥೆ ಇರುವ ಲೋಕಸಭೆಯ ಒಳಗೆ ಅಪರಿಚಿತರು ಏಕಾಏಕಿ ನುಗ್ಗಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವಿಸಿದೆ.

ಈವರೆಗೆ ತಿಳಿದುಬಂದಿರುವ ಮಾಹಿತಿ ಪ್ರಕಾರ ಆರೋಪಿಗಳಲ್ಲಿ ಸಾಗರ ಶರ್ಮ ಎಂಬಾತ ಮೈಸೂರು ಸಂಸದ ಪ್ರತಾಪ್​ ಸಿಂಹ ಅವರ ಹೆಸರಲ್ಲಿ ಪಾಸ್​ ಪಡೆದಿದ್ದಾನೆ. ಮತ್ತೊಬ್ಬ ಆರೋಪಿ ಮೈಸೂರು ಮೂಲದ ಇಂಜಿನಿಯರ್​ ಮನೋರಂಜನ್​ ಡಿ ಎಂದು ಗುರುತಿಸಲಾಗಿದೆ. ಇಬ್ಬರನ್ನು ಸಹ ಬಂಧಿಸಲಾಗಿದೆ.
ಆರೋಪಿಗಳಿಬ್ಬರು ಸಂಸದ ಪ್ರತಾಪ್​ ಸಿಂಹ ಅವರ ಹೆಸರಿನಲ್ಲಿ ಪಾಸ್​ ಪಡೆದಿದ್ದಾರೆ ಎಂದು ಉಚ್ಛಾಟಿತ ಬಿಎಸ್​ಪಿ ಸಂಸದ ಡ್ಯಾನಿಶ್​ ಅಲಿ ಆರೋಪ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಬಂಧಿತ ಆರೋಪಿಗಳಲ್ಲಿ ಒಬ್ಬರಿಗೆ ನೀಡಲಾದ ಸಂದರ್ಶಕರ ಪಾಸ್ ನಲ್ಲಿ ಸಾಗರ ಶರ್ಮಾ ಹೆಸರಿದ್ದು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಅವರಿಗೆ ಪಾಸ್‌ ನೀಡಲಾಗಿದೆ. ಮತ್ತೊಬ್ಬ ಒಳನುಗ್ಗಿದ ವ್ಯಕ್ತಿಯನ್ನು ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಮೈಸೂರು ಮೂಲದ ಮನೋರಂಜನ್ ಡಿ ಎಂದು ಗುರುತಿಸಲಾಗಿದೆ.
ಇಬ್ಬರು ವ್ಯಕ್ತಿಗಳು ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದರು ಮತ್ತು ಹಳದಿ ಬಣ್ಣದ ಹೊಗೆಯನ್ನು ಹೊರಸೂಸುವ ಡಬ್ಬಿಗಳನ್ನು ತೆರೆದು ಸಂಸತ್ತಿನ ಸದಸ್ಯರಲ್ಲಿ (ಸಂಸದರು) ಗಾಬರಿಯನ್ನು ಉಂಟುಮಾಡಿದರು. ಘಟನೆ ನಡೆದ ಕೂಡಲೇ ಸದನವನ್ನು ಮುಂದೂಡಲಾಯಿತು.

ಇದೇ ವೇಳೆ ಸಂಸತ್ತಿನ ಹೊರಗೆ ಓರ್ವ ಪುರುಷ ಮತ್ತು ಮಹಿಳೆ ಹಳದಿ ಬಣ್ಣ ಹೊರಸೂಸುವ ವಸ್ತುವನ್ನು ಹಿಡಿದು ಪ್ರತಿಭಟನೆ ನಡೆಸಿದರು. ಇಬ್ಬರು ಸಾರಿಗೆ ಭವನದ ಎದುರು ಪೊಲೀಸರು ಬಂಧಿಸಿದ್ದು, ಅವರನ್ನು 42 ವರ್ಷದ ನೀಲಂ ಮತ್ತು 25 ವರ್ಷದ ಅಮೋಲ್ ಶಿಂಧೆ ಎಂದು ಗುರುತಿಸಲಾಗಿದೆ. ನೀಲಂ ಹರಿಯಾಣದ ಹಿಸಾರ್ ನಿವಾಸಿ ಮತ್ತು ಅಮೋಲ್ ಶಿಂಧೆ ಮಹಾರಾಷ್ಟ್ರದ ಲಾತೂರ್ ನಿವಾಸಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಘಟನೆಯ ಬಗ್ಗೆ ಮಾತನಾಡಿರುವ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಶೂನ್ಯ ಸಮಯದಲ್ಲಿ ನಡೆದ ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ದೆಹಲಿ ಪೊಲೀಸರಿಗೆ ಅಗತ್ಯ ಸೂಚನೆಗಳನ್ನು ಸಹ ನೀಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಇದು ಕೇವಲ ಹೊಗೆ ಎಂದು ಕಂಡುಬಂದಿದೆ. ಸದ್ಯ ಇಬ್ಬರನ್ನೂ ಬಂಧಿಸಲಾಗಿದ್ದು, ಅವರಲ್ಲಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಸತ್ತಿನ ಹೊರಗಿದ್ದ ಇಬ್ಬರನ್ನೂ ಸಹ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದರು

ಪ್ರಮುಖ ಸುದ್ದಿ :-   ಮಹದೇವ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಬಂಧನ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement