ಸುರಪುರ: ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಯಾದಗಿರಿ : ಕೃಷಿ ಹೊಂಡದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ಮುಳುಗಿ ನೀರು ಪಾಲಾದ  ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಕೃಷಿಹೊಂಡದಲ್ಲಿ ಮಕ್ಕಳು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ.
ಮೃತ ಬಾಲಕರನ್ನು ಕಿರಣ (6), ಬಸಮ್ಮ (11), ಶರತ್ (6), ಹನುಮೇಶ (7) ಎಂದು ಗುರುತಿಸಲಾಗಿದೆ. ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಮಕ್ಕಳು ಈಜಲೆಂದು ಕೃಷಿ ಹೊಂಡಕ್ಕೆ ತೆರಳಿದ್ದರು. ಈಜಾಡಲು ಬಾರದೇ ಇದ್ದದರಿಂದ  ಕೃಷಿ ಹೊಂಡದ ಹೂಳಿನಲ್ಲಿ ಸಿಲುಕು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಕ್ಕಳನ್ನು ಕಳೆದುಕೊಂಡು ಪೋಷಕರು  ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement