ಥಾಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ಬಳಸುವ ಗಿರ್ಡರ್ ಲಾಂಚರ್ ಕುಸಿದು 16 ಮಂದಿ ಸಾವು

ಮುಂಬೈ: ಥಾಣೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರವು ಕುಸಿದು ಬಿದ್ದು ಕನಿಷ್ಠ 16 ಜನರು ಸಾವಿಗೀಡಾಗಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ನಸುಕಿನ ಜಾವ ಈ ಅಪಘಾತ ಸಂಭವಿಸಿದೆ.
ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಗಿರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ ಸುಮಾರು 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸಂಭವಿಸಿದೆ. ಗಾಯಾಳುಗಳೊಂದಿಗೆ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಪೊಲೀಸ್ ಸಿಬ್ಬಂದಿ, ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.
ಹೆದ್ದಾರಿ ಮತ್ತು ಹೈ-ಸ್ಪೀಡ್ ರೈಲು ಸೇತುವೆ ನಿರ್ಮಾಣ ಯೋಜನೆಗಳಲ್ಲಿ ಪ್ರಿಕಾಸ್ಟ್ ಬಾಕ್ಸ್ ಗಿರ್ಡರ್‌ಗಳನ್ನು ಸ್ಥಾಪಿಸಲು ಯಂತ್ರವನ್ನು ಬಳಸಲಾಗುತ್ತದೆ.
ಇದು ಹಿಂದೂ ಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ ಎಂದು ಹೆಸರಿಸಲಾಗಿದ್ದು, ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ 701-ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳು ಹಾಗೂ ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ.ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಮುಖ ಸುದ್ದಿ :-   ಆಸ್ಪತ್ರೆಯಲ್ಲಿ ಎಡವಟ್ಟು : 4 ವರ್ಷದ ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡುವುದರ ಬದಲು ನಾಲಿಗೆಗೆ ಆಪರೇಶನ್‌ ಮಾಡಿದ ವೈದ್ಯರು...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement