3ನೇ ಹಂತದ ಅನ್‍ಲಾಕ್ : ಕೆಲವು ಷರತ್ತುಗಳೊಂದಿಗೆ ದೇವಸ್ಥಾನ, ಶಾಪಿಂಗ್ ಮಾಲ್, ಪಬ್-ಕ್ಲಬ್ ಓಪನ್…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಬಹುತೇಕ ಎಲ್ಲ ಚಟುವಟಿಕೆಗಳು ಕಾರ್ಯಾರಂಭವಗಲಿವೆ. ಸದ್ಯ ಘೋಷಣೆ ಮಾಡಿರುವ 2ನೇ ಹಂತದ ಲಾಕ್‍ಡೌನ್ ಸೋಮವಾರ ಅಂತ್ಯಗೊಳ್ಳಲಿದೆ.
3ನೇ ಅನ್‍ಲಾಕ್ ಜಾರಿ ಮಾಡುವ ಸಂಬಂಧ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು, ಬಹುತೇಕ ಸೋಮವಾರದಿಂದ ರಾಜ್ಯದಲ್ಲಿ ಎಲ್ಲ ಚಟುವಟಿಕೆಗಳು ಪುನರಾರಂಭಗೊಳ್ಳುವ ಸಾಧ್ಯತೆಯಿದೆ.
ಅನ್‍ಲಾಕ್ 3.೦ರಲ್ಲಿ ಸಿನಿಮಾ ಮಂದಿರ, ಶಾಪಿಂಗ್ ಮಾಲ್, ಪಬ್-ಕ್ಲಬ್, ಬಾರ್‌ ಗಳಿಗೆ ಅನುಮತಿ ನೀಡುವ ಸಾಧ್ಯತೆ ಇದೆ. ಅನ್‍ಲಾಕ್ 3.೦ ರಲ್ಲಿ ನೈಟ್ ಮಾಲ್‍ಗಳ ತೆರವು ಸಮಯದಲ್ಲಿ ಕೆಲವೊಂದು ಬದಲಾವಣೆ ಮಾಡಿ ಓಕೆ ಮಾಡುವ ಸಾಧ್ಯತೆಯಿದೆ. ಬೆಳಗ್ಗೆ 8ರಿಂದ ಸಂಜೆ 7ರ ವರೆಗೆ ತೆರೆಯಲು ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ.
ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್‍ಲಾಕ್ 3.೦ ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಪಾಸಿವಿಟಿ ದರ ಗಮನದಲ್ಲಿರಿಸಿಕೊಂಡು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಹೋಟೆಲ್‍ಗಳಿಗೆ ಸಿಕ್ಕ ವಿನಾಯಿತಿಯಂತೆ, ಬಾರುಗಳಿಗೂ ವಿನಾಯಿತಿ ಸಿಗುವ ಸಾಧ್ಯತೆ ಇದೆ. ಶೇ.50ರಷ್ಟು ಗ್ರಾಹಕರಿಗೆ ಬಾರುಗಳಲ್ಲಿ ಮದ್ಯ ಸೇವನೆಗೆ ಅವಕಾಶ ನೀಡುವ ಸಾಧ್ಯತೆಯಿದೆ.
ಕ್ಲಬ್,ಗಳಿಗೂ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ಪಾರ್ಟಿ ಹಾಗೂ ಸಿನೆಮಾ ಥಿಯೇಟರ್‌ಗಳಂತಹ ಹೆಚ್ಚು ಜನ ಗುಂಪು ಸೇರುವ ಚಟುವಟಿಕೆಗಳಿಗೆ ನಿರ್ಬಂಧ ತೆರವು ಮಾಡುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಜುಲೈ 15ವರೆಗೂ ಥಿಯೇಟರುಗಳನ್ನು ತೆರೆಯುವುದು ಅನುಮಾನ. ಕೆಲವು ನಿರ್ಬಂಧ ವಿಧಿಸುವ ಮೂಲಕ ದೇಗುಲಗಳನ್ನು ತೆರೆಯಲು ಅವಕಾಶ ನೀಡುವ ಸಾಧ್ಯತೆ ಇದೆ.
ಕಳೆದ ಏಪ್ರಿಲ್ 27ರಿಂದ ರಾಜ್ಯದಲ್ಲಿ ಕೊರೋನಾ ಲಾಕ್‍ಡೌನ್ ಜಾರಿ ಮಾಡಲಾಗಿತ್ತು. ನಂತರ ಅದು ಜೂ.14ರ ಬಳಿಕ ಸ್ವಲ್ಪ ಸಡಿಲಿಕೆ ನೀಡಲಾಯಿತು. ತದನಂತ ಜೂ. 21 ರಿಂದ ಅನ್‍ಲಾಕ್ 2.0ಜಾರಿಗೆ ತರಲಾಯಿತು. ಕೆಲವು ನಿರ್ಬಂಧಗಳೊಂದಿಗೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿತ್ತು. ಮೊದಲು 16 ಜಿಲ್ಲೆಗಳಲ್ಲಿ ಅನ್‍ಲಾಕ್ ಘೋಷಣೆ ಮಾಡಿ ನಂತರ ಆ ಪಟ್ಟಿಗೆ 6 ಜಿಲ್ಲೆಗಳನ್ನು ಸೇರಿಸಲಾಗಿತ್ತು.
ಸದ್ಯಕ್ಕೆ ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 1.97 ರಷ್ಟಿದೆ. ಹಾಗಾಗಿ ಅನ್‍ಲಾಕ್-3 ಜಾರಿಯಾಗುವ ಸಾಧ್ಯತೆಗಳಿವೆ. ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದ ಕಾರಣ ರಾಜ್ಯದಲ್ಲಿ ಹಂತ ಹಂತವಾಗಿ ಅನ್‍ಲಾಕ್ ಪ್ರಕ್ರಿಯೆ ಕೂಡ ಆರಂಭವಾಗಿದೆ. ಹೀಗಾಗಲೆ ಕೆಲವು ಜಿಲ್ಲೆಗಳಿಗೆ ಅನ್‍ಲಾಕ್ ಘೋಷಿಸಲಾಗಿದೆ.
ಮೈಸೂರು ಸೇರಿದಂತೆ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಪಾಸಿಟಿವಿಟಿ ಪ್ರಮಾಣ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಎಲ್ಲಾ ವಲಯಗಳಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಸಡಿಲಗೊಳಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ಅಶ್ಲೀಲ ವೀಡಿಯೊ ಪ್ರಕರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ರಾಜ್ಯ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement