ರಾಕ್ಷಸೀ ಕೃತ್ಯ…| ಪತ್ನಿಯನ್ನು ಬೈಕಿಗೆ ಕಟ್ಟಿ ಗ್ರಾಮದುದ್ದಕ್ಕೂ ಎಳೆದೊಯ್ದ ಪತಿ : ಕೃತ್ಯ ಕ್ಯಾಮರಾದಲ್ಲಿ ಸೆರೆ

ರಾಜಸ್ಥಾನದ ನಗೌರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮದ್ಯವ್ಯಸನಿ ಪತಿ ಥಳಿಸಿದ ನಂತರ ಆಕೆಯನ್ನು ಬೈಕ್‌ಗೆ ಕಟ್ಟಿ ಗ್ರಾಮದಲ್ಲಿ ಎಳೆದೊಯ್ದ ಘಟನೆ ನಡೆದಿರುವುದು ವರದಿಯಾಗಿದೆ.
ಈ ಕೃತ್ಯ ಎಸಗಿದ ವ್ಯಕ್ತಿಯನ್ನು 32 ವರ್ಷದ ಪ್ರೇಮರಾಮ ಮೇಘವಾಲ್ ಎಂದು ಗುರುತಿಸಲಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.
ವೀಡಿಯೋದಲ್ಲಿ, ಮೋಟಾರು ಸೈಕಲ್‌ಗೆ ಕಾಲುಗಳನ್ನು ಕಟ್ಟಿ ಮಹಿಳೆಯನ್ನು ಎಳೆದುಕೊಂಡು ಹೋಗಿರುವುದು ಕಂಡುಬಂದಿದೆ. ಅವಳು ಸಹಾಯಕ್ಕಾಗಿ ಕೂಗುತ್ತಿದ್ದರೂ ಘಟನೆಯನ್ನು ಚಿತ್ರೀಕರಿಸಿದ ವ್ಯಕ್ತಿ ಸೇರಿದಂತೆ ಯಾವೊಬ್ಬ ವ್ಯಕ್ತಿಯೂ ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಲಿಲ್ಲ.

ತನ್ನ ಇಚ್ಛೆಗೆ ವಿರುದ್ಧವಾಗಿ ಜೈಸಲ್ಮೇರ್‌ನಲ್ಲಿರುವ ತನ್ನ ಸಹೋದರಿ ಮನೆಗೆ ಹೋಗಲು ಮಹಿಳೆ ಮುಂದಾದಾಗ ಆಕೆಯ ಗಂಡ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಪತಿ ಆಕೆಯನ್ನು ತನ್ನ ಮೋಟಾರ್‌ಸೈಕಲ್‌ನ ಹಿಂಭಾಗಕ್ಕೆ ಕಟ್ಟಿ ಎಳೆದೊಯ್ದಿದ್ದು, ಈ ಕೃತ್ಯ ವೈರಲ್‌ ವೀಡಿಯೊದಲ್ಲಿ ಸೆರೆಯಾಗಿದೆ.
ಈ ಘಟನೆ ನಹರಸಿಂಗಪುರ ಗ್ರಾಮದಲ್ಲಿ ಸುಮಾರು ಒಂದು ತಿಂಗಳ ಹಿಂದೆ ನಡೆದಿದ್ದು, ವೀಡಿಯೊ ವೈರಲ್‌ ಆದ ನಂತರ ಬೆಳಿಕಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗ ತನ್ನ ಸಂಬಂಧಿಕರೊಂದಿಗೆ ವಾಸಿಸುತ್ತಿರುವ ಮಹಿಳೆ ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಲಿಲ್ಲ. ಆದರೆ,‌ ಆರೋಪಿಯನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಘವಾಲ್ ಮದ್ಯವ್ಯಸನಿಯಾಗಿದ್ದು, ಆಗಾಗ್ಗೆ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸುತ್ತಿದ್ದ ಮತ್ತು ಗ್ರಾಮದ ಇತರರ ಬಳಿಯೂ ಅವಳಿಗೆ ಮಾತನಾಡಲು ಕೊಡುತ್ತಿರಲಿಲ್ಲ. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಹ್ಯಾರಿಯರ್ ಕಾರು, ನಕಲಿ ಎನ್‌ಎಸ್‌ಜಿ ಕಮಾಂಡೋಗಳು ! ಸೇನೆಯ ಬ್ರಿಗೇಡಿಯರ್ ಸೋಗಿನಲ್ಲಿ ಓಡಾಡುತ್ತಿದ್ದ ಯುವಕ ಬಲೆಗೆ ಬಿದ್ದಿದ್ದೇ ರೋಚಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement