ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಹೆಚ್ಚಳ ; ಮತ್ತೆ ರಾಜ್ಯದ ಅತೀ ಶ್ರೀಮಂತ ದೇಗುಲದ ಪಟ್ಟ

ಮಂಗಳೂರು : ರಾಜ್ಯದ ಪ್ರಸಿದ್ಧ ದೇವಾಲಯ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ.
2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.
ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಭಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ನಂ.1 ಸ್ಥಾನವನ್ನು ಭದ್ರಪಡಿಸಿಕೊಂಡಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ದತ್ತಿ ಇಲಾಖೆಯಡಿ ಬರುತ್ತದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ. ಆದಾಯವಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವರ್ಷವಾರು ಆದಾಯ
2020-21ರಲ್ಲಿ 68.94 ಕೋಟಿ ರೂ.
2021-22 ರಲ್ಲಿ 72.73 ಕೋಟಿ ರೂ.
2022-23ರಲ್ಲಿ 123 ಕೋಟಿ ರೂ.
2023-24ರಲ್ಲಿ 146.01 ಕೋಟಿ ರೂ.
2024-25ರಲ್ಲಿ 155.95 ಕೋಟಿ ರೂ.
ಅತೀ ಹೆಚ್ಚು ಆದಾಯ ಗಳಿಸುವ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪ್ರಥಮ ಸ್ಥಾನದಲ್ಲಿದ್ದರೆ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ. ಈ ದೇವಸ್ಥಾನದ ಆದಾಯ 31 ಕೋಟಿ ರೂ. ಅದೇ ರೀತಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 20 ಕೋಟಿ ರೂ.ಗಳ ಅಂದಾಜು ಆದಾಯದೊಂದಿಗೆ ಮೂರನೇ ಸ್ಥಾನದಲ್ಲಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement