ಇದೇ 24ರಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ – ಪ್ರಧಾನಿ ಮೋದಿ ಭೇಟಿ

ವಾಷಿಂಗ್ಟನ್:ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ 24 ರಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೇಟಿ ಮಾಡಲಿದ್ದಾರೆ.
ಸಭೆಯಲ್ಲಿ, ಉಭಯ ದೇಶಗಳಿಗೆ ಸಂಬಂಧಿಸಿದ ದ್ವಿಪಕ್ಷೀಯ ವಿಷಯಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಲಿದ್ದಾರೆ ಎಂದು ಶ್ವೇತ ಭವನದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗಿನ ಸಭೆಗೆ ಮುನ್ನ ಪ್ರಧಾನಿ ಮೋದಿ ಶ್ವೇತ ಭವನದಲ್ಲಿ ಕ್ವಾಡ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.
ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳು, ಇಂಡೋ-ಪೆಸಿಫಿಕ್ ಸಂಬಂಧಗಳು, ಕೊರೋನಾ ಸಾಂಕ್ರಾಮಿಕ, ಹವಾಮಾನ ಬದಲಾವಣೆ, ರಕ್ಷಣೆ ಮತ್ತಿತರ ಅಂಶಗಳ ಬಗ್ಗೆ ಅವರೊಂದಿಗೆ ಚರ್ಚಿಸಲಿದ್ದಾರೆ.
ಈ ಸಭೆಗೂ ಮುನ್ನ ಈ ತಿಂಗಳ 23ರಂದು ಜಪಾನ್ ಹಾಗೂ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಗಳನ್ನು ಮೋದಿ ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆ. ಕ್ವಾಡ್‌ ಸಭೆಯೂ ನಡೆಯಲಿದೆ.

0 / 5. 0

ಪ್ರಮುಖ ಸುದ್ದಿ :-   ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಮಹಿಳೆಯರಿಗೆ 35%ರಷ್ಟು ಮೀಸಲಾತಿ : ಚುನಾವಣೆ ಸನಿಹದಲ್ಲಿ ಬಿಹಾರದ ನಿತೀಶ್‌ ಸರ್ಕಾರದ ಮಹತ್ವದ ನಿರ್ಧಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement