ಯಾದಗಿರಿಯಲ್ಲಿ ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು
ಯಾದಗಿರಿ: ಯಾದಗಿರಿಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಸುರಿದಿದೆ. ರಾತ್ರಿ ಇಡೀ ಮಳೆ ಸುರಿದಿದ್ದು, ಕೆರೆಗಳು ತುಂಬಿ ನೀರು ಗ್ರಾಮಕ್ಕೆ ನುಗ್ಗಿರುವ ಘಟನೆ ಜಿಲ್ಲೆಣ ಹುಣಸಗಿಯಲ್ಲಿ ವರದಿಯಾಗಿದೆ.
ಕಳೆದ ರಾತ್ರಿ ಜಿಲ್ಲೆಯಲ್ಲಿ 75. 5 ಎಂಎಂಎ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹುಣಸಗಿ ತಾಲೂಕಿನ ಗೆದ್ದಲಮರಿ, ಬಲಶೆಟ್ಟಿ ಗ್ರಾಮದಲ್ಲಿ ಮಳೆ ಜೋರಾಗಿ ಸುರಿದಿದ್ದರಿಂದ ಕೆಲವು ಮನೆಗಳಿಗೆ ನೀರು ನುಗ್ಗಿದೆ. ರೈತರ ಹೊಲಗಳಿಗೂ ನೀರು ನುಗ್ಗಿದ್ದು, ಸಂಪೂರ್ಣ ಬೆಳೆ ನಾಶವಾಗಿದೆ.ಬಲಶೆಟ್ಟಿಹಾಳ ಮತ್ತು ಗೆದ್ದಮರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯೂ ಸಹ ಜಲಾವೃತಗೊಂಡಿದ್ದು, ಎರಡು ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ. ಕೆರೆ ತುಂಬಿದ್ದರಿಂದ ಅಪಾರ ಪ್ರಮಾಣದ ನೀರು ಗ್ರಾಮಕ್ಕೆ ಹರಿದು ಬರುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ