ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ (north coastal Andhra Pradesh ) ಆರು ಮೀನುಗಾರರುವ ಬೋಟ್ ಗುಲಾಬ್ ಚಂಡಮಾರು ಇಬ್ಬರು ಮೃತಪಟ್ಟಿದ್ದಾರೆ ಹಾಗೂ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಪಲಸಾ ಗ್ರಾಮದ ಮೂವರು ಮೀನುಗಾರರು ಸುರಕ್ಷಿತವಾಗಿ ಈಜಿ ಪಾರಾಗಿದ್ದಾರೆ ಎಂದು ವರದಿ ತಿಳಿಸಿದ್ದು, ಮೀನುಗಾರಿಕಾ ಸಚಿವ ಎಸ್ ಅಪ್ಪಲ ರಾಜು ನೌಕಾಪಡೆ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸುವಂತೆ ಕರೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಗುಲಾಬ್ ಚಂಡಮಾರುತವು ಭಾನುವಾರ ಸಂಜೆ ತನ್ನ ಲ್ಯಾಂಡ್ ಸ್ಲೈಡ್ (Cyclone Gulab began its landfall) ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಎಚ್ಚರಿಕೆ ಹಿನ್ನೆಲೆಯಲ್ಲಿ ಒಡಿಶಾ ಮತ್ತು ಆಂಧ್ರಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುಲಾಬ್ ಚಂಡಮಾರುತವು ಬಹುತೇಕ ಪಶ್ಚಿಮ ದಿಕ್ಕಿಗೆ ಚಲಿಸಿ ಉತ್ತರ ಆಂಧ್ರಪ್ರದೇಶ, ದಕ್ಷಿಣ ಒಡಿಶಾ ಕರಾವಳಿಯನ್ನು ಕಳಿಂಗಪಟ್ಟಣಂ ಮತ್ತು ಗೋಪಾಲಪುರ ನಡುವೆ ಹಾದುಹೋಗುವ ಸಾಧ್ಯತೆ ಇದೆ.
ನಿಮ್ಮ ಕಾಮೆಂಟ್ ಬರೆಯಿರಿ