ರೇಣುಕಾಚಾರ್ಯ, ಜೀವರಾಜ್​ಗೆ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ಮತ್ತೆ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್.ಜೀವರಾಜ್ ಮರು ನೇಮಕಗೊಂಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ರೇಣುಕಾಚಾರ್ಯ ಮತ್ತು ಜೀವರಾಜ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಈಗ ಬಸವರಾಜ ಬೊಮ್ಮಾಯಿ‌ ಮುಖ್ಯಮಂತ್ರಿಯಾಗಿ ಎರಡು ತಿಂಗಳ ಬಳಿಕ ಇವರಿಬ್ಬರು ಮತ್ತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದಾರೆ. ಇವರಿಗೆ ಸಂಪುಟ ದರ್ಜೆ ಸಚಿವರ ಸವಲತ್ತುಗಳನ್ನು ಸಿಗಲಿದೆ.

0 / 5. 0

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement