ದೆಹಲಿಯಲ್ಲಿ ಜಾರಿ ನಿರ್ದೇಶನಲಾಯಕ್ಕೆ ದಾಖಲೆ ಸಲ್ಲಿಸಿದ ಮಾಜಿ ಸಚಿವ ಜಮೀರ್ ಅಹಮ್ಮದ್‌

ಬೆಂಗಳೂರು: ಕಾಂಗ್ರೆಸ್‍ನ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ದೆಹಲಿಗೆ ತೆರಳಿ ಜಾರಿ ನಿರ್ದೇಶನಾಯಲಯ ಕಚೇರಿಯಲ್ಲಿ ಅಧಿಕಾರಿಗಳಿಗೆ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲೆ ಇತ್ತೀಚೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲಿಸಿದ್ದರು. ಹಾಗೂ ಜಮೀರ್ ಅವರ ಆದಾಯದ ಮೂಲದ ಬಗ್ಗೆ ತನಿಖೆ ನಡೆಸಿದ್ದರು.
ಹೊಸ ಮನೆ ಕಟ್ಟಲು ಮತ್ತು ನಿವೇಶನ ಖರೀದಿಸಲು ಹಣ ಕ್ರೋಢಿಕರಿಸಿದ ಬಗ್ಗೆ, ಮನೆ ನಿರ್ಮಾಣಕ್ಕೆ ತಗುಲಿರುವ ವೆಚ್ಚದ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದರು. ಆದರೆ ಅದರಿಂದ ಅವರಿಗೆ ಸಮಾಧಾನವಾಗದೆ ಮತ್ತಷ್ಟು ಮಾಹಿತಿ ಕೇಳಿ ನೋಟಿಸ್ ನೀಡಲಾಗಿತ್ತು. ಎರಡು ಬಾರಿ ಜಾರಿ ನಿರ್ದೇಶನಾಲಯದ ಕಚೇರಿಗೆ ಭೇಟಿ ನೀಡಿದ್ದ ಜಮೀರ್ ಅಹಮದ್ ಖಾನ್ ಇಂದು (ಶುಕ್ರವಾರ) ಮತ್ತೊಮ್ಮೆ ಹೋಗಿ ಕೆಲ ದಾಖಲೆಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.

 

ನಿಮ್ಮ ಕಾಮೆಂಟ್ ಬರೆಯಿರಿ

advertisement