ನವದೆಹಲಿ : ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಕುಸ್ತಿಪಟು ಸುಶೀಲಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಿಸಿದೆ.
ಸುಶೀಲ್ ಕುಮಾರ್ ತನ್ನ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಲಾಗಿದೆ. ಹೀಗಾಗಿ ಪ್ರಕರಣದಲ್ಲಿ ತನಗೆ ಜಾಮೀನು ನೀಡಬೇಕು ಎಂದು ನ್ಯಾಯಾಲಯಕ್ಕೆ ಕೋರಿದ್ದರು. ಆದರೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು ಪ್ರಾಸಿಕ್ಯೂಷನ್ ಮತ್ತು ಪ್ರತಿವಾದದ ವಾದಗಳನ್ನು ಸುದೀರ್ಘವಾಗಿ ಆಲಿಸಿದ ನಂತರ ಸುಶೀಲ್ ಕುಮಾರ್ ಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.
ಸುಶೀಲ್ ಕುಮಾರ್ ಹಾಗೂ ಸ್ನೇಹಿತರು ಸೇರಿಕೊಂಡು ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾನನ್ನು ಕೊಲೆ ಮಾಡಿದ್ದು. ನಂತರ ಆತನ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಸುಶೀಲ್ ಕುಮಾರ್ ಹೆಸರು ಕೇಳಿಬಂದ ಬೆನ್ನಲ್ಲೇ ಅನೇಕ ದಿನಗಳ ವರೆಗೆ ತಪ್ಪಿಸಿಕೊಂಡು ಪರಾರಿಯಾಗಿದ್ದ 38 ವರ್ಷದ ಕುಸ್ತಿಪಟು ಸುಶೀಲಕುಮಾರನನ್ನು ಮೇ 23 ರಂದು ಬಂಧಿಸಲಾಗಿತ್ತು. ಜೂನ್ 2,ರಿಂದಲೂ ಜೈಲಿನಲ್ಲಿಯೇ ಇದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ