ಕಾರಿನ ಟೈರ್‌ ಬ್ಲಾಸ್ಟ್‌: ತಾಯಿ-ಮಗ ಸಾವು

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗುಣಲಕ್ಷ್ಮೀ(35) ಮತ್ತು ದೈವಿಕ್​(12) ಮೃತರು ಎಂದು ಗುರುತಿಸಲಾಗಿದೆ. ಗುಣಲಕ್ಷ್ಮೀ ಅವರ ಪತಿ ಜಗದೀಶ್​ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಇಂದು (ಬುಧವಾರ) ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಕಾರಿನ ಟೈರ್​ ಬ್ಲಾಸ್ಟ್​ ಆಗಿದ್ದು, ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಕಾರಿನಲ್ಲೇ ತಾಯಿ-ಮಗ ಮೃತಪಟ್ಟಿದ್ದಾರೆ. ಮೈಸೂರಿನ ಕುವೆಂಪು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಅಧಿಕ ಅರ್ಜಿಗಳ ವಿಚಾರಣೆ ; ನ್ಯಾಯಮೂರ್ತಿ ನಾಗಪ್ರಸನ್ನ ಮತ್ತೊಂದು ಮೈಲಿಗಲ್ಲು

ನಿಮ್ಮ ಕಾಮೆಂಟ್ ಬರೆಯಿರಿ

advertisement