ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರನ್ನು ಭಯೋತ್ಪಾದಕರು ಹತ್ಯೆ ಮಾಡುತ್ತಿರುವುದರಿಂದ ಆತಂಕಗೊಂಡ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಮಂಗಳವಾರ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಟಿಕೆಟ್ ಕೌಂಟರ್ ಗಳ ಹೊರಗೆ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು, ಉಧಂಪುರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ. ಏಕೆಂದರೆ ಅಲ್ಲಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಹೊರ ಹೋಗಲು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮುವಿನ ರೈಲ್ವೆ ನಿಲ್ದಾಣದ ಹೊರಗೆ, ಪುರುಷರು, ಮಹಿಳೆಯರು ಮತ್ತು ಮಕ್ಕಳು ನೀರು ಅಥವಾ ಆಶ್ರಯ ಇತರ ಮೂಲ ಸೌಕರ್ಯಗಳಿಲ್ಲದೆ ಉದ್ದದ ಸರತಿ ಸಾಲಿನಲ್ಲಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದರು.
ಹಲವು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬಗಳು ಕಣಿವೆಯಿಂದ ಪಲಾಯನ ಮಾಡುತ್ತಿವೆ. ಕಳೆದ ಎರಡು ವಾರಗಳಲ್ಲಿ ಭಯೋತ್ಪಾದಕರು 11 ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ ನಂತರ ನಾವು “ನರಕ” ಅನುಭವಿಸಿದ್ದೇವೆ. ಮತ್ತೆ ಯಾವುದೇ ಕಾರಣಕ್ಕೂ ಕಾಶ್ಮೀರಕ್ಕೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ