ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲ ಸೌಕರ್ಯ ಮಿಷನ್‌ಗೆ ಮೋದಿ ಚಾಲನೆ

ವಾರಾಣಸಿ : ದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಆರೋಗ್ಯ ಮೂಲ ಸೌಕರ್ಯ ಬಲಪಡಿಸುವ ಅತಿ ದೊಡ್ಡ ಯೋಜನೆಯಾಗಿರುವ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲ ಸೌಕರ್ಯ ಮಿಷನ್‌ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉತ್ತರ ಪ್ರದೇಶದ ವಾರಣಸಿಯಲ್ಲಿ ಚಾಲನೆ ನೀಡಿದ್ದಾರೆ.
ಅಲ್ಲದೆ, ಪ್ರಧಾನಿಯವರು ತಮ್ಮ ಸಂಸತ್ ಕ್ಷೇತ್ರದಲ್ಲಿ 5200 ಕೋಟಿ ರೂ.ಗಳಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಸಹ ಉದ್ಘಾಟಿಸಿದರು.
ಇದು 10 ಪ್ರಮುಖ ರಾಜ್ಯಗಳಲ್ಲಿ ಗುರುತಿಸಿರುವ 17,788 ಗ್ರಾಮೀಣ ಆರೋಗ್ಯ ಮತ್ತು ಕಲ್ಯಾಣ ಕೇಂದ್ರಗಳಿಗೆ ನೆರವು ನೀಡುತ್ತದೆ. ಹಾಗೂ ಉಳಿದ ಎಲ್ಲ ರಾಜ್ಯಗಳಲ್ಲಿ 11,024 ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೇಂದ್ರಗಳನ್ನು ಆರಂಭಿಸಲು ನೆರವು ನೀಡಲಿದೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕ್ಷೇತ್ರದಲ್ಲಿ ಪ್ರಮುಖ ಆರೈಕೆ ಮತ್ತು ಪ್ರಾಥಮಿಕ ಆರೈಕೆ ಸೌಲಭ್ಯಗಳ ನಡುವಿರುವ ವ್ಯತ್ಯಾಸವನ್ನು ಕಡಿಮೆಗೊಳಿಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ನಿರೀಕ್ಷಿಸಲಾಗಿದೆ.
ದೇಶದೆಲ್ಲೆಡೆಗೆ ಜಾಲ ವಿಸ್ತರಿಸಿಕೊಂಡಿರುವ ಪ್ರಯೋಗಾಲಯಗಳ ಮೂಲಕ ರೋಗ ನಿರ್ಧರಣಾ ಸೇವೆ ಲಭಿಸಲಿದ್ದು, ಪ್ರತಿ ಜಿಲ್ಲೆಯಲ್ಲೂ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತದೆ.

ಪ್ರಮುಖ ಸುದ್ದಿ :-   ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಕ್ಷಮೆಯಾಚಿಸಿದ ಮಧ್ಯಪ್ರದೇಶದ ಸಚಿವ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement