ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ.
ಲಾರಿ ಕಂದಕಕ್ಕೆ ಉರುಳಿದ್ದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಗುಂಬೆ ಘಾಟಿಯಲ್ಲಿ ತಿರುವಿನಲ್ಲಿ ಈ ಅಫಘಾತ ಸಂಭವಿಸಿದೆ. ಲಾರಿ ಕಾರವಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹ ಮತ್ತು ಗಾಯಾಳುಗಳನ್ನು ಮೇಲಕ್ಕೆತ್ತಲು ಹರಸಾಹಸ ಪಡಬೇಕಾಯಿತು. ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ನಾಲ್ವರು ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮಿಯಾರು ಜೋಡುಕಟ್ಟೆ ನಿವಾಸಿಗಳು ಎಂದು ಗುರುತಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ