ಮೂಡಬಿದ್ರೆಯಲ್ಲಿ ಸಿಡಿಲು ಬಡಿದು ಇಬ್ಬರು ಯುವಕರು ಸಾವು, ಮೂವರ ಸ್ಥಿತಿ ಗಂಭೀರ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದ್ದು, ಮೂಡಡುಬಿದ್ರೆ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಯುವಕರ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ತಾಲೂಕಿನ ಕಂಚಿಬೈಲು ಪ್ರದೇಶದಲ್ಲಿ ಸಿಡಿಲು ಬಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸಿಡಿಲಿಗೆ ಮೃತಪಟ್ಟವರನ್ನು ಯಶವಂತ್‌ ( 25 ವರ್ಷ ) ಮತ್ತು ಮಣಿಪ್ರಸಾದ್‌ (25 ವರ್ಷ ) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಗಣೇಶ್‌, ಸಂದೀಪ್‌ ಮತ್ತು ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಳಾಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳಿಂದಲೂ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದೆ.

0 / 5. 0

ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ ವಿರುದ್ಧ ಎಫ್‌ಐಆರ್‌ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement