ಕೇದಾರನಾಥದಲ್ಲಿ 12 ಅಡಿ ಎತ್ತರದ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಉತ್ತರಾಖಂಡದ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಿ, 12 ಅಡಿ ಎತ್ತರದ ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ.
ಈ ಪ್ರತಿಮೆಯು 35 ಟನ್‌ಗಳಷ್ಟು ತೂಗುತ್ತದೆ ಮತ್ತು ಇದನ್ನು ಮೈಸೂರು ಮೂಲದ ಶಿಲ್ಪಿಗಳು ಕ್ಲೋರೈಟ್ ಸ್ಕಿಸ್ಟ್‌ನಿಂದ ತಯಾರಿಸಿದ್ದಾರೆ, ಇದು ಮಳೆ, ಬಿಸಿಲು ಮತ್ತು ಕಠಿಣ ಹವಾಮಾನವನ್ನು ತಡೆದುಕೊಳ್ಳುತ್ತದೆ ಎಂದು ಹೇಳಲಾಗಿದೆ. 2013ರ ಪ್ರವಾಹದಲ್ಲಿ ಆದಿ ಗುರು ಶಂಕರಾಚಾರ್ಯ ಸಮಾಧಿಯ ಮೂಲ ಪ್ರತಿಮೆ ಕೊಚ್ಚಿ ಹೋಗಿತ್ತು. ಇದನ್ನು ಕೇದಾರನಾಥ ದೇವಾಲಯದ ಹಿಂಭಾಗದಲ್ಲಿ ಮತ್ತು ಸಮಾಧಿ ಪ್ರದೇಶದ ಮಧ್ಯದಲ್ಲಿ ಭೂಮಿಯನ್ನು ಅಗೆದು ನಿರ್ಮಿಸಲಾಗಿದೆ.

ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿಯವರು ಪುರಾತನ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ‘ಆರತಿ’ ಮಾಡಿದರು. ಭಗವಾನ್ ಶಿವನಿಗೆ ನಮನ ಸಲ್ಲಿಸಿದ ಅವರು ಪ್ರಾರ್ಥನೆ ಸಲ್ಲಿಸಿದ ನಂತರ ಕೇದಾರನಾಥ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದರು.
ಮಂದಾಕಿನಿ ನದಿಯ ದಂಡೆಯ ಮೇಲಿರುವ ಕೇದಾರನಾಥ ದೇವಾಲಯವು ಯಮುನೋತ್ರಿ, ಗಂಗೋತ್ರಿ ಮತ್ತು ಬದರಿನಾಥಗಳನ್ನು ಒಳಗೊಂಡಿರುವ ನಾಲ್ಕು ಪುರಾತನ ಯಾತ್ರಾ ಸ್ಥಳಗಳಲ್ಲಿ ‘ಚಾರ್ ಧಾಮ್ ಯಾತ್ರೆ’ ಎಂದು ಉಲ್ಲೇಖಿಸಲಾಗಿದೆ. 8 ನೇ ಶತಮಾನದಲ್ಲಿ ಜಗದ್ಗರು ಆದಿ ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟ ಕೇದಾರನಾಥ ದೇವಾಲಯವು ಶಿವನಿಗೆ ಸಮರ್ಪಿತವಾಗಿದೆ.

ಪ್ರಮುಖ ಸುದ್ದಿ :-   ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

ಇದರ ಬೆನ್ನಲ್ಲೇ, ಪ್ರಧಾನಿ ಮೋದಿ ಅವರು ಸರಸ್ವತಿ ತಡೆಗೋಡೆ ಆಸ್ಥಾಪತ್ ಮತ್ತು ಘಾಟ್‌ಗಳು, ಮಂದಾಕಿನಿ ತಡೆಗೋಡೆ ಆಸ್ಥಾಪತ್, ತೀರ್ಥ ಪುರೋಹಿತ ಮನೆಗಳು ಮತ್ತು ಮಂದಾಕಿನಿ ನದಿಯ ಗರುಡ್ ಚಟ್ಟಿ ಸೇತುವೆ ಸೇರಿದಂತೆ 130 ಕೋಟಿ ರೂಪಾಯಿಗಳ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಬಹುವಿಧ ಯೋಜನೆಗಳಿಗೆ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement