ಶಿವಮೊಗ್ಗ: ಜಿಲ್ಲೆಯ ನಂದಿನ ಡೈರಿ ಬಳಿಯಲ್ಲಿ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ
ಮೃತರನ್ನು ಮಂಜುನಾಥ್ (28) ಮತ್ತು ಅಂತೋನಿ (35) ಎಂದು ಗುರುತಿಸಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ ನಗರದ ಸಮೀಪದ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿನ ನಂದಿನಿ ಡೈರಿ ಬಳಿಯ ಮಾಚೇನಹಳ್ಳಿಯ ಬಳಿ, ಹಿಂಬದಿಯಿಂದ ಬಂದಂತ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ